ವಾಲಿಬಾಲ್ ಪಂದ್ಯಾವಳಿ : ಜಿಲ್ಲಾ ಮಟ್ಟಕ್ಕೆ ಆಯ್ಕೆ
ಅಥಣಿ : ಸೆ.೧೪:ತಾಲೂಕಿನ ಮದಭಾವಿ ಗ್ರಾಮದ ಶ್ರೀ ಸಿದ್ದೇಶ್ವರ ವಿದ್ಯಾವರ್ಧಕ ಸಂಸ್ಥೆಯ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್ ಎಂ ಪಾಟೀಲ, ಕಾರ್ಯದರ್ಶಿ ಸೋಮಲಿಂಗ ನಿವಲಗಿ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.