ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಪ್ರವಾಸ
ಕಲಬುರಗಿ:ಸೆ.13:ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ ಗುಂಡೂರಾವ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಸೆಪ್ಟೆಂಬರ್ 17 ರಂದು ಮಂಗಳವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಸಂಜೆ 4 ಗಂಟೆಗೆ ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಜರುಗಲಿರುವ 19ನೇ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 18 ರಂದು ಬುಧವಾರ ಬೆಳಿಗ್ಗೆ 8 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ರಾಯಚೂರಿಗೆ ಪ್ರಯಾಣಿಸುವರು.