ಕೃಷಿ ಸಚಿವರ ಪ್ರವಾಸ
ಕಲಬುರಗಿ:ಸೆ.13:ರಾಜ್ಯದ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಸೆಪ್ಟೆಂಬರ್ 17 ರಂದು ಮಂಗಳವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಸಂಜೆ 4 ಗಂಟೆಗೆ ಕಲಬುರಗಿ ಮಿನಿ ವಿಧಾನಸೌಧದ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜರುಗಲಿರುವ 17ನೇ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವರು. ನಂತರ ರಾತ್ರಿ 8 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.