ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಪ್ರವಾಸ
ಕಲಬುರಗಿ:ಸೆ.13:ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೊಪ್ಪಳದಿಂದ ರಸ್ತೆ ಮೂಲಕ ಸೆಪ್ಟೆಂಬರ್ 17ರಂದು ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಸಂಜೆ 4 ಗಂಟೆಗೆ ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಜರುಗಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ, ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 18 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರಗಿ ವಿಭಾಗದ ಹಿಂದುಳಿದ ಪ್ರವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ವಿಭಾಗದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.