ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಸೆ.13:ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಸೆಪ್ಟೆಂಬರ್ 14 ರಂದು ಶನಿವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 15 ರಂದು ಭಾನುವಾರ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 16 ರಂದು ಸೋಮವಾರ ಮಧ್ಯಾಹ್ನ 12 ಗಂಟೆಗೆ ಕಲಬುರಗಿ ವೀರಶೈವ ಕಲ್ಯಾಣ ಮಂಟಪದಲ್ಲಿ ಶ್ರೀ ಶ್ರೀ ಶ್ರೀ ಮಲ್ಲಿಕಾರ್ಜುನ ಅಪ್ಪಾಜಿ ಮಹಲ್ ರೋಜಾ ಇವರ ಜನ್ಮ ದಿನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ನಂತರ ರಾತ್ರಿ 8 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ರಾಯಚೂರಿಗೆ ಪ್ರಯಾಣಿಸುವರು.
ಸೆಪ್ಟೆಂಬರ್ 17 ರಂದು ಮಂಗಳವಾರ ಮಧ್ಯಾಹ್ನ 1.30 ಗಂಟೆಗೆ ರಾಯಚೂರಿನಿಂದ ರಸ್ತೆ ಮೂಲಕ ಕಲಬುರಗಿಗೆ ಆಗಮಿಸುವರು. ನಂತರ ಮಧ್ಯಾಹ್ನ 4 ಗಂಟೆಗೆ ಕಲಬುರಗಿ ಪ್ರಾದೇಶಿಕ ಕಚೇರಿ ಸಭಾಂಗಣದಲ್ಲಿ ಜರುಗಲಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ, ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 18 ರಂದು ಬುಧವಾರ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.