ರಾಜ್ಯದ ಅರಣ್ಯ ಸಚಿವರ ಪ್ರವಾಸ
ಕಲಬುರಗಿ:ಸೆ.13:ರಾಜ್ಯದ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಬೀದರದಿಂದ ರಸ್ತೆ ಮೂಲಕ ಸೆಪ್ಟೆಂಬರ್ 17 ರಂದು ಮಂಗಳವಾರ ಸಂಜೆ 4 ಗಂಟೆಗೆ ಆಗಮಿಸಿ, ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜರುಗಲಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವರು.
ನಂತರ ರಾತ್ರಿ 9 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರ ಜಿಲ್ಲೆಯ ಭಾಲ್ಕಿಗೆ ಪ್ರಯಾಣಿಸುವರು.