ಜಿ.ಪಂ. ಕಚೇರಿಯಲ್ಲಿ ಧ್ವಜಾರೋಹಣ
ಕಲಬುರಗಿ:ಸೆ.13:ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಇದೇ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 7.30 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಅವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.