ಪರಿಶಿಷ್ಟ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಕ್ರಮಕ್ಕೆ ಆಗ್ರಹಿಸಿ ಡಿಎಸ್‍ಎಸ್ ಪ್ರತಿಭಟನೆ, ಡಿಸಿಗೆ ಮನವಿ ಸಲ್ಲಿಕೆ
ವಿಜಯಪುರ,ಸೆ.13:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ‘ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದೆ. ಈ ತೀರ್ಪುನ್ನು ರಾಜ್ಯ ಸರ್ಕಾರ ತಕ್ಷಣವೇ ಅನುμÁ್ಠನಗೊಳಿಸುವಂತೆ ಆಗ್ರಹಿಸಿ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾಧಿಕಾರಿ ಟಿ ಭೂಬಾಲನ ಅವರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ತಮ್ಮಣ್ಣ ಕಾನಗಡ್ಡಿ ಮಾತನಾಡಿ, ಪÀರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ದವಾದ ಅಧಿಕಾರವಿದೆ ಎಂದು ಆಗಸ್ಟ್ 01-2024 ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದೆ. ಈ ತೀರ್ಪನ್ನು ಅನುμÁ್ಠನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುμÁ್ಠನಗೊಳಿಸಬೇಕು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪೆÇ್ರ.ಬಿ. ಕೃಷ್ಣಪ್ಪನವರ ಜನ್ಮ ದಿನವಾದ ಜೂನ್ 09 ನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು. ಪೆÇ್ರ. ಬಿ.ಕೃಷ್ಣಪ್ಪನವರಿಗೆ “ಕರ್ನಾಟಕ ರತ್ನ ” ಪ್ರಶಸ್ತಿ ಯನ್ನು ರಾಜ್ಯ ಸರ್ಕಾರ ನೀಡಬೇಕು. ಬಾಕಿ ಉಳಿದಿರುವ “ಬ್ಯಾಕ್ ಲಾಗ್” ಹುದ್ದೆಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಭರ್ತಿ ಮಾಡಬೇಕು. ಒಳಮೀಸಲಾತಿ ಜಾರಿಯಾಗುವವರೆಗೂ ರಾಜ್ಯ ಸರ್ಕಾರದ ಎಲ್ಲಾ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ತಡೆ ಹಿಡಿಯಬೇಕು ಎಂದರು.
ಜಿಲ್ಲಾ ಸಂಘಟನಾ ಸಂಚಾಲಕÀ ವಾಯ್.ಎಸ್. ಮ್ಯಾಗೇರಿ ಹಾಗೂ ಭಾರತೀಯ ದಲಿತ ಪ್ಯಾಂಥರ್ ಬಸವರಾಜ ಗುಡಿಮನಿ ಮಾತನಾಡಿ, ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು. ಕಳೆದ ಎರಡು ಮೂರು ತಲೆಮಾರುಗಳಿಂದ 3-4 ಎಕರೆ ಯಷ್ಟು ಅರಣ್ಯ ಭೂಮಿ ಸಾಗುವಳಿ ಮಾಡುತ್ತಾ ಉಪ ಜೀವನ ಸಾಗಿಸುತ್ತಿರುವ ಕೃಷಿ ಕಾರ್ಮಿಕರನ್ನು ದೌರ್ಜನ್ಯದಿಂದ ಒಕ್ಕಲೆಬ್ಬಿಸದೆ ಪರ್ಯಾಯ ಭೂಮಿ ನೀಡಬೇಕು- ಬೇನಾಳ ಗ್ರಾಮದಲ್ಲಿ ರಿ.ಸ.ನಂ: 221 30 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ಸರ್ಕಾರಿ ಜಮೀನನ್ನು ಸಾಗವಳಿ ಮಾಡುತ್ತಿದ್ದ ದಲಿತರಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ಸಾಗುವಳಿ ಮಾಡುವ ಚೀಟಿ ನೀಡಬೇಕು. ಆಲಮಟ್ಟಿ ಪಂಪ್ ಹತ್ತಿರ ಡಾ. ಬಿ.ಆರ್. ಅಂಬೇಡ್ಕರವರ ವೃತ್ತ ನಿರ್ಮಾಣ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೂಲದಡಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ಕಾಯಂಗೊಳಿಸಬೇಕೆಂದರು.
ಈ ಸಂದರ್ಭಧಲ್ಲಿ ಹರೀಶ ಮ್ಯಾಗೇರಿ, ರಾಯಪ್ಪ ದೊಡಮನಿ, ಕನಕೇಶ ಬಾಗೇವಾಡಿ, ಸಂಗಮೇಶ ಕಳ್ಳಿಮನಿ, ಪವಾಡೆಪ್ಪ ಮಾದರ, ಭೀಮಪ್ಪ ಮಾದರ, ಅಣ್ಣಪ್ಪ ಮಾದರ, ಬೀರಪ್ಪ ದೊಡಮನಿ ತಿಪ್ಪಣ್ಣ ಮಾದರ ಮತ್ತಿತರರು ಉಪಸ್ಥಿತರಿದ್ದರು.