ಚನ್ನಮ್ಮ, ರಾಯಣ್ಣ ತತ್ವಾದರ್ಶ ಅನುಕರಣೀಯ: ಈಶ್ವರಪ್ಪ
ಹುಬ್ಬಳ್ಳಿ, ಸೆ 13: ಕಿತ್ತೂರ ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ತತ್ವಾದರ್ಶ, ದೇಶಪ್ರೇಮ ಅನುಕರಣೀಯ. ಅಂತಹ ಮಹಾನ್ ಸೇನಾನಿಗಳ ಹೆಸರಲ್ಲಿ ನನಗೆ ಪ್ರಶಸ್ತಿ ಲಭಿಸಿದ್ದು ಸಂತಸವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಅಕ್ಕನ ಬಳಗದ ಸಭಾಂಗಣದಲ್ಲಿ ಶ್ರೀ ಗಜಾನನ ಮಹಾಮಂಡಳ ಹಮ್ಮಿಕೊಂಡಿದ್ದ ಸಾರ್ವಜನಿಕ ಗಣೇಶ ಸಮಿತಿಗಳಿಗೆ ಪಾರಿತೋಷಕ ವಿತರಣೆ ಸಮಾರಂಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ-2024 ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಎಲ್ಲರೂ ಪರಸ್ಪರ ಪ್ರೀತಿ ವಿಶ್ವಾಸದ ತಳಹದಿಯ ಮೇಲೆ ಹಬ್ಬ ಹರಿದಿನ ಆಚರಿಸಬೇಕೆಂಬ ಸದುದ್ದೇಶದಿಂದ ಬಾಲ ಗಂಗಾಧರ ತಿಲಕ ಅವರು ಸಾರ್ವಜನಿಕ ಗಣೇಶೋತ್ಸವಕ್ಕೆ ಮುನ್ನುಡಿ ಬರೆದರು ಎಂದರು.
ಮನಸೂರಿನ ಶ್ರೀ ಡಾ. ಬಸವರಾಜ ದೇವರು ಮಾತನಾಡಿದರು. ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಮಾತನಾಡಿ ಹುಬ್ಬಳ್ಳಿ, ಬೆಳಗಾವಿ ಹಾಗೂ ವಿಜಯಪುರದ ವಿಮಾನ ನಿಲ್ದಾಣಗಳಿಗೆ ದೇಶದ ಮಹಾನ್ ಪುರುಷರ ಹೆಸರುಗಳನ್ನು ನಾಮಕರಣ ಮಾಡಬೇಕೆಂದು ಮನವಿ ಮಾಡಿದರು.
ಡಾ. ಚಂದ್ರಶೇಖರ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಶ್ರೀ ಗಜಾನನ ಮಹಾ ಮಂಡಳದ ಸಂಸ್ಥಾಪಕ ಅಧ್ಯಕ್ಷ ಡಿ. ಗೊವಿಂದರಾವ್, ಕಾಂತೇಶ ಈಶ್ವರಪ್ಪ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಹು-ಧಾ ಬಂಟ ಸಮಾಜದ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶಿವಲೀಲಾ, ಬಂಜಾರ ಸಮಾಜದ ಪಾಂಡುರಂಗ ಪಮ್ಮಾರ, ಅಶೋಕ ಒಡೆಯರ
ಹಾಗೂ ಗಜಾನನ ಪ್ರತಿಷ್ಠಾಪನಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.