ಜಿಲ್ಲಾ ಪಂಚಾಯತ ತ್ರೈಮಾಸಿಕ ಕೆಡಿಪಿ ಸಭೆ
ಧಾರವಾಡ, ಸೆ13: ಕೆಡಿಪಿ ಸಭೆಯು, ಜಿಲ್ಲೆಯಲ್ಲಿ ಅನುμÁ್ಠನದಲ್ಲಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಆಧ್ಯತೆ ಮೇಲೆ ಚರ್ಚೆ ಆಗಬೇಕು. ಅಧಿಕಾರಿಗಳು ಸಭೆಗೆ ಅಪೂರ್ಣ ಮಾಹಿತಿ ತಂದರೆ, ಸಭೆಯ ಉದ್ದೇಶ ಈಡೆರುವುದಿಲ್ಲ. ರೈತರ ಬಗ್ಗೆ, ಬಡವರ ಬಗ್ಗೆ ಕಳಕಳಿ ಇರಬೇಕು. ಅಧಿಕಾರಿಗಳು ಜವಾಬ್ದರಿಯಿಂದ ಸಭೆಗೆ ಸರಿಯಾದ ಮಾಹಿತಿ ಮತ್ತು ಉತ್ತರ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಖಡಕ್ ಎಚ್ಚರಿಕೆ ನೀಡಿದರು.
ಅವರು ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ 2024-25 ನೇ ಸಾಲಿನ ಜೂನ್ ಅಂತ್ಯಕ್ಕೆ ಕೊನೆಗೊಂಡ 1 ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕೃಷಿ, ಮಾರುಕಟ್ಟೆ, ತೋಟಗಾರಿಕೆ, ರೇμÉ್ಮ, ಪಶುಪಾಲನಾ, ನೀರಾವರಿ ಇಲಾಖೆಗಳ ಅಧಿಕಾರಿಗಳು ಕೆಡಿಪಿ ಸಭೆಗೆ ಪೂರ್ಣ ಮಾಹಿತಿಯೊಂದಿಗೆ ಬರಬೇಕು. ವಾಸ್ತವಿಕ ವರದಿ ನೀಡುವದರಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಹಾಯವಾಗುತ್ತದೆ ಎಂದು ಸಚಿವರು ತಿಳಿಸಿದರು.
ಲೋಕೋಪಯೋಗಿ, ನೀರಾವರಿ ಮತ್ತು ಇತರ ಪ್ರಮುಖ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳ ಹಾಜರಾತಿ ಖಾತರಿಗೆ ಪೇಸ್ ರೀಡಿಂಗ್ ಆನ್ ಲೈನ್ ಅಟೆಂಡೆನ್ಸ್ ಮಾಡಬೇಕು ಎಂದು ಸಚಿವರು ಸೂಚಿಸಿದರು.
ಜಿಲ್ಲೆಯಲ್ಲಿ ಎಲ್ ಆ್ಯಂಡ್ ಟಿ ಕಂಪನಿಯಿಂದ ಜಲ್ ಜೀವನ ಮಿಷನ್ ಯೋಜನೆ ತೃಪ್ತಿಕರವಾಗಿ ಅನುμÁ್ಠನಗೊಳ್ಳುತ್ತಿಲ್ಲ. ನಿಗದಿತ ಅವಧಿಯಲ್ಲಿ ಯೋಜನೆ ಮುಗಿಸದಿದ್ದರೆ ಮತ್ತು ಪ್ರತಿ ಹಂತದ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸದಿದ್ದರೆ ಎಲ್ ಆ್ಯಂಡ್ ಟಿ ಕಂಪನಿ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗುತ್ತದೆ ಎಂದು ಸಚಿವರು ಎಚ್ಚರಿಸಿದರು.
ಜಿಲ್ಲೆಯ ಶಾಸಕರ ಅಧ್ಯಕ್ಷತೆಯ ಫಲಾನುಭವಿ ಆಯ್ಕೆಯ ವಿವಿಧ ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಹೆಸರು ಖರೀದಿ: ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ಕೇಂದ್ರದಲ್ಲಿ ರೈತರ ನೋಂದಣಿ ಆರಂಭವಾಗಿದ್ದು, ಸುಮಾರು 3 ಸಾವಿರ ರೈತರು ತಮ್ಮ ಹೆಸರು ನೋಂದಾಯಿಸಿದ್ದಾರೆ. ನೋಂದಣಿ ಪ್ರಗತಿಯಲ್ಲಿದೆ. ಹವಾಮಾನ ವೈಪರಿತ್ಯದಿಂದಾಗಿ ಹೆಸರುಕಾಳುಗಳಲ್ಲಿ ತೇವಾಂಶ ಇದೆ. ಗ್ರೇಡಿಂಗ್ ಬಂದ ತಕ್ಷಣ ಖರೀದಿ ಆರಂಭಿಸಲಾಗುತ್ತದೆ ಎಂದು ಕೃಷಿ ಮಾರುಕಟ್ಟೆ ಇಲಾಖೆ ಉಪ ನಿರ್ದೇಶಕ ಲಮಾಣಿ ಅವರು ತಿಳಿಸಿದರು.
ಅಗತ್ಯ ಗೊಬ್ಬರ, ಬೀಜ ಇದೆ: ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತ್ರೊಳ್ಳಿ ಮಾತನಾಡಿ, ಹೆಸರು, ಗೋವಿನ ಜೋಳ, ಉದ್ದು ಸೇರಿ ವಿವಿಧ ಬೆಳೆಗಳ ಕಟಾವು ನಡೆದಿದೆ. ಹಿಂಗಾರಿಗೆ ಅಗತ್ಯ ಬೀಜ, ರಸಗೊಬ್ಬರ ದಾಸ್ತಾನು ಇದೆ ಎಂದು ಅವರು ಹೇಳಿದರು.
ಪಶುಪಾಲನೆ ಇಲಾಖೆ ಪ್ರಗತಿ: ಉಪ ನಿರ್ದೇಶಕ ಡಾ. ರವಿ ಸಾಲಿಗೌಡರ ಮಾತನಾಡಿ, ಇಲಾಖೆ ಯೋಜನೆಗಳು ಪ್ರಗತಿಯಲ್ಲಿವೆ. ಪಶುಪಾಲನೆ ಹೆಚ್ಚಳಕ್ಕೆ ಅಗತ್ಯ ಜನಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.
ಜಲ ಜೀವನ ಮಿಷನ್: ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 249 ಗ್ರಾಮಗಳಲ್ಲಿ ನೀರು ಸರಬರಾಜು ವ್ಯವಸ್ಥೆಯನ್ನು ಆಯಾ ಗ್ರಾಮ ಪಂಚಾಯತಿಗಳಿಗೆ ವಹಿಸಲಾಗಿದೆ. ಉಳಿದ ಗ್ರಾಮ ಪಂಚಾಯತಗಳಿಗೆ ನೀರು ಸರಬರಾಜು ವ್ಯವಸ್ಥೆ ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಇಂಜನೀಯರ ಜಗದೀಶ ಅವರು ತಿಳಿಸಿದರು.
ಶಾಶ್ವತ ಖರೀದಿ ಕೇಂದ್ರ: ರೈತರಿಗೆ ಅನುಕೂಲವಾಗುವಂತೆ ಬೆಳೆ ಕಟಾವು ಹಂತದಲ್ಲೇ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಶಾಶ್ವತವಾಗಿ ತೆರೆಯುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದರು.
ವಸತಿ ನಿಲಯಗಳು ಆರಂಭಕ್ಕೆ ಸೂಚನೆ: ರಾಜ್ಯ ಸರಕಾರವು ಜಿಲ್ಲೆಗೆ 8 ಅಲ್ಪಸಂಖ್ಯಾತರ ಹಾಗೂ 14 ಹಿಂದುಳಿದ ವರ್ಗಗಳ ವಸತಿ ನಿಲಯಗಳನ್ನು ಮಂಜೂರಿ ಮಾಡಿದ್ದು, ಶೀಘ್ರವೇ ವಸತಿ ನಿಲಯಗಳ ಆರಂಭಕ್ಕೆ ಕ್ರಮ ವಹಿಸುವಂತೆ ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರಕಾರಿ ಜಮೀನುಗಳನ್ನು ಗುರುತಿಸಿ ಅವುಗಳ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಕೆರೆ, ಗೋಮಾಳ ಅತಿಕ್ರಮಣ ಆಗದಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಶಾಸಕರಾದ ಎನ್.ಎಚ್.ಕೋನರಡ್ಡಿ, ಎಂ.ಆರ್.ಪಾಟೀಲ ಅವರು ಮಾತನಾಡಿದರು.