ಸೆ.೧೫ ಕ್ಕೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ 30 ನೇ ವಾರ್ಷಿಕ ಮಹಾಸಭೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಸೆ‌.೧೩; ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ 30ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯನ್ನು ಸೆ. 15 ರಂದು  ಬೆಳಿಗ್ಗೆ 11:30ಕ್ಕೆ ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಕರೆಯಲಾಗಿದೆ ಎಂದು ಪರಿಷತ್ತಿನ ಅಧ್ಯಕರಾದ  ಕೆ.ಬಿ ಪರಮೇಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷರಾದ ಗದಗದ ಪೂಜ್ಯ  ಶ್ರೀ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ದಿವ್ಯಸಾನಿಧ್ಯ ಹಾಗೂ ಪರಿಷತ್ತಿನ ಗೌರವ ಸಲಹೆಗಾರರಾದ ಗೋ.ರು ಚನ್ನಬಸಪ್ಪ ಮತ್ತು ರಾಜ್ಯ ಕದಳಿ ಮಹಿಳಾ ವೇದಿಕೆಯ ಸಂಚಾಲಕರಾದ ಶರಣೆ ಸುಶೀಲ ಸೋಮಶೇಖರ್ ಅವರುಗಳ ಗೌರವ ಉಪಸ್ಥಿತಿಯಲ್ಲಿ ನಡೆಯುವ ಈ ಮಹಾಸಭೆಯ ಅಧ್ಯಕ್ಷತೆಯನ್ನು ಅಖಿಲ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶರಣ ಡಾ.ಸಿ ಸೋಮಶೇಖರ್ ವಹಿಸಲಿದ್ದಾರೆ. ಈ ಮಹಾಸಭೆಯ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ನೆರವೇರಿಸಲಿದ್ದಾರೆ.ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣ ಮತ್ತು 12ನೇ ಶತಮಾನದ ಬಸವಾದಿ ಶಿವಶರಣರ ಅನುಭವದ ಜೀವನ ಮೌಲ್ಯಗಳನ್ನು ಒಳಗೊಂಡ ವಚನ ಸಾಹಿತ್ಯವನ್ನು ಜನಮಾನಸಕ್ಕೆ ತಿಳಿಸುವ, ತಲುಪಿಸುವ ಉದ್ದೇಶದಿಂದ ಸ್ಥಾಪಿತವಾದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಈ 30ನೇ ವಾರ್ಷಿಕ ಮಹಾಸಭೆಗೆ ದಾವಣಗೆರೆ ಜಿಲ್ಲೆಯ ಜನರು ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿ ಎಲ್ಲಾ ಅಜೀವ ಸದಸ್ಯರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಮನವಿ‌ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಹೆಚ್.ಕೆ ಲಿಂಗರಾಜ್, ಡಾ. ಶಿವರಾಜ್ ಕಬ್ಬೂರು, ಲಿಂಗಾನಂದ ಕಮತ್ತಹಳ್ಳಿ, ಭರಮಪ್ಪ, ಮೈಸೂರು, ಆರ್.ಸಿದ್ದೇಶಪ್ಪ, ಬಿ.ಟಿ.ಪ್ರಕಾಶ್, ಜಿ.ಎಂ.ಕುಮಾರಪ್ಪ, ಬುಳ್ಳಾಪುರದ ಮಲ್ಲಿಕಾರ್ಜುನಸ್ವಾಮಿ ಇದ್ದರು.