ಸೆ.28ರ ಎಸ್‌ಐ ಪರೀಕ್ಷೆಯೂಮುಂದೂಡಿಕೆ: ಪರಮೇಶ್ವರ್
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಸೆ.13: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗಳ  402 ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಶೀಘ್ರದಲ್ಲೇ ಹೊಸ  ದಿನಾಂಕ ಪ್ರಕಟಿಸಲಾಗುವುದೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
 ನಿನ್ನೆ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಾಥಮಿಕ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ ಮುಖ್ಯ ಪರೀಕ್ಷೆ
ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿ ಯಾಗಿದೆ.
ಆದ್ದರಿಂದ ಅಭ್ಯರ್ಥಿ ಗಳು ಒಟ್ಟಿಗೆ ಎರಡು ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಸೆ.28ರಂದು ಪರೀಕ್ಷೆ ಮಾಡಲು ಯೋಜಿಸಲಾ ಗಿತ್ತು. ಅಂದುಕೂಡಯುಪಿಎಸ್‌ಸಿ ಪರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಪಿಎಸ್‌ಐ ಪರೀಕ್ಷೆ ಮುಂದೂಡಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆ ದಿನಾಂಕ ನಿಗದಿಪಡಿಸಿ ತಿಳಿಸಲಾಗುವುದು ಎಂದಿದ್ದಾರೆ.