ಹಿಂದಿ ದಿವಸ ಹೇರಿಕೆ ವಿರುದ್ಧ ಜನಾಂದೋಲನ ಕಾರ್ಯಕ್ರಮ
ಸಂಜೆವಾಣಿ ವಾರ್ತೆ
ಮಂಡ್ಯ: ಸೆ.13-ಸೆಪ್ಟೆಂಬರ್ 14ರಂದು ಹಿಂದಿ ದಿವಸ ಹೇರಿಕೆ,ಹಿಂದಿ ದಬ್ಬಾಳಿಕೆ ಖಂಡಿಸಿ ಕದಂಬ ಸೈನ್ಯ ವತಿಯಿಂದ ಸೆಪ್ಟೆಂಬರ್ 13 ಮತ್ತು 14 ರಂದು ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು .
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಹಿಂದಿ ಹೇರಿಕೆ ವಿರುದ್ಧ ರಾಜ್ಯ ಸರ್ಕಾರ ಇದುವರೆಗೂ ಧನಿ ಎತ್ತಿಲ್ಲ.ನಮಗೆ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಬೇಕು ಎಂದರು.
ಅಧಿಕಾರಿಗಳು ಹಿಂದಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಖಂಡಿಸಿದ ಅವರು ಎಡ ಮತ್ತು ಬಲಪಂಥಿ ಯರು ರಾಷ್ಟ್ರೀಯವಾದಿಗಳು ಹಿಂದಿ ಹೇರಿಕೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡು,ಕೇರಳ,ಆಂಧ್ರ ರಾಜ್ಯಗಳಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸುತ್ತಿದ್ದಾರೆ.ಆದರೆ ನಮ್ಮಲ್ಲಿ ವಿರೋಧಿಸುತ್ತಿಲ್ಲ. ಇದರಿಂದ ಕನ್ನಡ ಭಾಷೆಗೆ ದೊಡ್ಡ ಅಪಾಯವಿದೆ ಎಂದು ಎಚ್ಚರಿಸಿದರು.
ಕೇಂದ್ರ ಸರ್ಕಾರ ರೈಲ್ವೆ,ವಿಮಾನ ಬ್ಯಾಂಕುಗಳು ಸೇರಿದಂತೆ ಎಲ್ಲಾ ಕಡೆ ಹಿಂದಿ ಭಾಷಿಗರಿಗೆ ಶೇಕಡ 80ರಷ್ಟು ಉದ್ಯೋಗ ನೀಡುತ್ತಿದೆ.ಕನ್ನಡ ನಾಡಿನಲ್ಲಿ ಕನ್ನಡಿಗರನ್ನು ವಂಚಿಸುತ್ತಿದ್ದರೂ,ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ ವಹಿಸಿದೆ ಎಂದು ದೂರಿದರು.
ಸೆಪ್ಟೆಂಬರ್ 14ರಂದು ಹಿಂದಿ ದಿವಸ ಹೇರಿಕೆ,ಹಿಂದಿ ದಬ್ಬಾಳಿಕೆ ಮತ್ತು ವಲಸಿಗರ ದಾಳಿ ಖಂಡಿಸಿ ಸೆಪ್ಟೆಂಬರ್ 13 ಮತ್ತು 14 ರಂದು ವಿಜಯಪುರ , ಬಾಗಲಕೋಟೆ ಸೇರಿದಂತೆ ವಿವಿಧೆಡೆ ಕದಂಬ ಸೈನ್ಯದ ವತಿಯಿಂದ ಜನಾಂದೋಲನ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು. ಸಂಘಟನೆಯ ರಾಜ್ಯ ಸಂಚಾಲಕ ಎಸ್.ಶಿವಕುಮಾರ್,ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್,ಮಂಡ್ಯ ಜಿಲ್ಲಾ ಸಂಚಾಲಕ ಸಲ್ಮಾನ್,ರಾಮನಗರ ಜಿಲ್ಲಾ ಕಾರ್ಯದರ್ಶಿ ಚಿಕ್ಕವೆಂಕಟಪ್ಪ, ರಾಮಣ್ಣ,ಮಂಡ್ಯ ಕೃಷ್ಣ , ಚಂದ್ರಶೇಖರಯ್ಯ ಸೇರಿದಂತೆ ಇತರರು ಇದ್ದರು.