ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸಿದ್ರಾಮಯ್ಯ ಚೌಕಿಮಠ ಆಯ್ಕೆ
ಅಫಜಲಪುರ: ಸೆ.೧೩:ತಾಲೂಕಿನ ಅತನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ(ಎಸ್.ಡಿ.ಎಂ.ಸಿ) ಅಧ್ಯಕ್ಷರಾಗಿ ಸಿದ್ರಾಮಯ್ಯ ಚೌಕಿಮಠ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ ಹಾಜರಿದ್ದರು.
ಶಾಲೆಯ ಅಭಿವೃದ್ಧಿ ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಎಲ್ಲ ಸದಸ್ಯರು, ಮುಖ್ಯ ಗುರುಗಳು, ಶಿಕ್ಷಕರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಅವರ ಸಲಹೆ ಸೂಚನೆ ಮಾರ್ಗದರ್ಶನ ಪಡೆದು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ನೀಡಿ ನನಗೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವೆ.
ಸಿದ್ರಾಮಯ್ಯ ಚೌಕಿಮಠ, ನೂತನ ಎಸ್.ಡಿ.ಎಂ.ಸಿ ಅಧ್ಯಕ್ಷ