ಅ.೬ ರಂದು ರಾಜ್ಯ ಸರ್ಕಾರಿ ಎನ್ ಪಿಎಸ್ ನೌಕರರ ಸಂಘದ ಕಾರ್ಯಕಾರಿಣಿ ಸಭೆ
ಸಂಜೆವಾಣಿ ವಾರ್ತೆ
ದಾವಣಗೆರೆ. ಅ.೪; ರಾಜ್ಯ ಸರ್ಕಾರ ಎನ್ ಪಿಎಸ್ ಯೋಜನೆ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸಿದ ಕಾರಣ, ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿಎಸ್ ನೌಕರರ ಸಂಘವು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಅ.6 ರಂದು ಬೆಳಿಗ್ಗೆ 10.30 ಕ್ಕೆ ಸಂಘದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಗಣ್ಣನವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮೂರು ಬಾರಿ ಸಮಿತಿ ರಚಿಸಿದ್ದು, ವಿರೋಧಿಸಿದ್ದರೂ, ಮತ್ತೆ ಸಮಿತಿಗೆ ಆದೇಶಿಸಿದೆ. ಸಂಘವು ಈ ಸಮಿತಿಗೆ ವಿರೋಧ ವ್ಯಕ್ತಪಡಿಸುತ್ತದೆ ಎಂದರು.ಸಭೆಯ ಅಜೆಂಡಾದಲ್ಲಿ ಎನ್ ಪಿಎಸ್ ಯೋಜನೆ ಕುರಿತು ರಚಿಸಿರುವ ಸಮಿತಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗುವುದೂ, ಓಪಿಎಸ್ ಜಾರಿಗೆ ಸರ್ಕಾರವನ್ನು ಒತ್ತಾಯಿಸುವುದು, ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರನ್ನು ಸೇರಿದಂತೆ, ಪದಾಧಿಕಾರಿಗಳನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ/ಕೈ ಬಿಡಲಿರುವ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಹಾಗೂ ಸಂಘದ ಚುನಾವಣೆಯ ವಿಷಯದಲ್ಲಿ ಸಂಘದ ನಿಲುವನ್ನು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ, ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಶಿವಕುಮಾರ್, ತಾಲ್ಲೂಕು ಅಧ್ಯಕ್ಷ ಗುರುಮೂರ್ತಿ, ಮುಖಂಡರಾದ ಜಿ. ಮಂಜಪ್ಪ, ಶಶಿಧರ್, ಮಲ್ಲಿಕಾರ್ಜುನ್ ಹಾಗೂ ಹೆಚ್.ಆರ್. ಮೋಹನ್ ಉಪಸ್ಥಿತರಿದ್ದರು.