ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿ ಆಚರಣೆ
ಬಾಗಲಕೋಟೆ,ಅ4: ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಬಾಗಲಕೋಟೆಯಲ್ಲಿ ಎನ್.ಎಸ್.ಎಸ್.ಹಾಗೂ ಸ್ಕೌಟ್ ಅಂಡ್ ಗೈಡ್ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮ ಕುರಿತು ವಿದ್ಯಾರ್ಥಿಗಳ ಉದ್ದೇಶಿಸಿ ಡಾ. ಎಂ ನಂಜುಂಡಸ್ವಾಮಿ ಹಾಗೂ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಜಗನ್ನಾಥ ಚವ್ಹಾಣ ಮಾತನಾಡಿದರು.
ಎಸ್. ಐ. ಪತ್ತಾರ್ ಅವರು ಸ್ವಚ್ಛತಾ ಹಿ ಸೇವಾ ಕುರಿತು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಅಪೇಕ್ಷ ಅಂಟಿನ ಪ್ರಾರ್ಥಿಸಿದರು. ಕುಮಾರಿ ಮಲ್ಲಿಕಾ ಮೇಟಿ ಸ್ವಾಗತಿಸಿದರು.ಪೂಜಾ ಕೊಣ್ಣೂರ ವಂದಿಸಿದರು. ಲಕ್ಷ್ಮಿ ಪಾಠತರ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲ ಪ್ರಾಧ್ಯಾಪಕರು ಹಾಗೂ ಕಚೇರಿ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.