ಮುಖ್ಯಮಂತ್ರಿಗೆ ‘ಜಯ’ಕ್ಕಾಗಿ ದೇವಳದಲ್ಲಿ ಮೊರೆ..
ಪುತ್ತೂರು; ಪುತ್ತೂರು ಮಹಾಲಿಂಗೇಶ್ವರ ದೇವಳ ಹಾಗೂ ಉಪ್ಪಿನಂಗಡಿ ಸಹಸ್ತ್ರಲಿಂಗೇಶ್ವರ ದೇವಳದಲ್ಲಿ ಬುಧವಾರ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನ್ಯಾಯಾಲಯದಲ್ಲಿ ಜಯ ಸಿಗಲಿ ಎಂದು ಕಾಂಗ್ರೇಸ್ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದರು.
ಮುಡಾ ಪ್ರಕರಣದಲ್ಲಿ ಪ್ರಸ್ತುತ ಸಂಕಷ್ಟಕ್ಕೆ ಸಿಲುಕಿರುವ ಮುಖ್ಯಮಂತ್ರಿ ಅವರಿಗೆ ನ್ಯಾಯಾಲಯದಲ್ಲಿ ನ್ಯಾಯದೇವತೆ ಒಲಿದುಬಂದು ಜಯಪ್ರಾಪ್ತಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ಉಪ್ಪಿನಂಗಡಿ ದೇವಳದಲ್ಲಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ರಾಧಾಕೃಷ್ಣ ನಾಯಕ್ ಮತ್ತಿತರರು ಉಪಸ್ಥಿತಿಯಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಪುತ್ತೂರು ದೇವಳದಲ್ಲಿ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ಅವರ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.