ಚಿಕಿತ್ಸೆ ಫಲಿಸದೆ ಯುವಕ ಮೃತ್ಯು
ಪುತ್ತೂರು: ತಿಂಗಳಾಡಿ ತ್ಯಾಗರಾಜನಗರದಲ್ಲಿ ಸೆ.೧೦ ರಂದು ಮಧ್ಯರಾತ್ರಿ ನಡೆದ ಸ್ಕೂಟರ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರ ಪುತ್ರ ಕೀರ್ತನ್ ಗೌಡ ಮೃತಪಟ್ಟ ಯುವಕ. ಸೆ.೧೦ ರಂದು ಪುತ್ತೂರಿನಲ್ಲಿ ನಡೆದ ಗಣೇಶೋತ್ಸವದಲ್ಲಿ ಪಾಲ್ಗೊಂಡು ಸ್ಕೂಟರ್‌ನಲ್ಲಿ ಹಿಂದಿರುಗುತ್ತಿದ್ದಾಗ ಅಪಘಾತವಾಗಿದ್ದು, ಸ್ಕೂಟರ್ ಬಿದ್ದ ಶಬ್ದಕ್ಕೆ ಸ್ಥಳೀಯರು ಆಗಮಿಸಿ ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೀರ್ತನ್ ಬಜರಂಗದಳ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.