ಮಹಿಳೆಯ ಸುಲಿಗೆ ಮಾಡಿದ್ದ ಆರೋಪಿ ಬಂಧನ
ಕಲಬುರಗಿ,ಸೆ.12-ಮಹಿಳೆಯೊಬ್ಬರನ್ನು ಪುಸಲಾಯಿಸಿ ಜೊತೆಯಲ್ಲಿ ಕರೆದುಕೊಂಡು ಹೋಗಿ ಅವರ ಬಳಿ ಇದ್ದ ಚಿನ್ನಾಭರಣ, ಮೊಬೈಲ್ ಮತ್ತು ನಗದು ಹಣ ದೋಚಿಕೊಂಡು ಹೋದ ಸುಲಿಗೆಕೋರನನ್ನು ಮಹಾಗಾಂವ ಪೊಲೀಸರು ಬಂಧಿಸಿದ್ದಾರೆ.
ಹುಸೇನ್ ತಂದೆ ಮಾದಪ್ಪಾ ಬಾಬಗೋಳ ಎಂಬಾತನನ್ನು ಬಂಧಿಸಿ 40 ಸಾವಿರ ರೂ.ಮೌಲ್ಯದ ಚಿನ್ನಾಭರಣ, 5 ಸಾವಿರ ರೂ.ಮೌಲ್ಯದ ಮೊಬೈಲ್ ಮತ್ತು 820 ರೂ.ನಗದು ಜಪ್ತಿ ಮಾಡಿದ್ದಾರೆ.
ಈತ ಮಹಿಳೆಯೊಬ್ಬರನ್ನು ಪುಸಲಾಯಿಸಿ ಜೊತೆಯಲ್ಲಿ ಕರೆದುಕೊಂಡು ಹೋಗಿ ಮಹಾಗಾಂವ ವಾಡಿ ತಾಂಡಾ ಸೀಮಾಂತರದ ಹೊಲದಲ್ಲಿ ಅವರ ಬಳಿ ಇದ್ದ ಚಿನ್ನಾಭರಣ, ಮೊಬೈಲ್ ಮತ್ತು ನಗದು ಹಣ ದೋಚಿಕೊಂಡು ಹೋಗಿದ್ದ. ಈ ಸಂಬಂಧ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಸ್‍ಪಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಎಸ್‍ಪಿ ಶ್ರೀನಿಧಿ, ಎಸಿಪಿ ಬಿಂದುಮಣಿ ಅವರ ಮಾರ್ಗದರ್ಶನದಲ್ಲಿ ಗ್ರಾಮೀಣ ಸಿಪಿಐ ಶಿವಶಂಕರ ಸಾಹು ಅವರ ನೇತೃತ್ವದಲ್ಲಿ ಪಿಎಸ್‍ಐ ಆಶಾ, ಸಿಬ್ಬಂದಿಗಳಾದ ಕುಪೇಂದ್ರ, ಕಿಶನ್ ಜಾಧವ್, ಬಸವರಾಜ, ಸಿದ್ದಲಿಂಗ ಮತ್ತು ಉಮೇಶ್ ಅವರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ಮಹಿಳೆಯಿಂದ ಸುಲಿಗೆ ಮಾಡಿದ್ದ ಚಿನ್ನಾಭರಣ, ಮೊಬೈಲ್ ಮತ್ತು ನಗದು ಹಣ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.