ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ
ಕಲಬುರಗಿ:ಸೆ.12: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಸೆಪ್ಟೆಂಬರ್ 21 ರಂದು ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಶರಣ ಬಸವ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕನ್ನಡ ಸಾಮರಸ್ಯದ ನೆಲೆಗಳು ಕಲ್ಯಾಣ ಕರ್ನಾಟಕ ವಿಭಾಗದ ಲೇಖಕರ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸುವರು. ನಂತರ ಸಂಜೆ 5.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಸೋಲಾಪುರಕ್ಕೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 22 ರಂದು ಭಾನುವಾರ ಬೆಳಿಗ್ಗೆ 9.30 ಗಂಟೆಗೆ ಸೋಲಾಪುರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಆಯೋಜಿಸಿರುವ ಮಹಾರಾಷ್ಟ್ರ ರಾಜ್ಯದ ಕನ್ನಡ ಮಾಧ್ಯಮ ಪ್ರಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಸೋಲಾಪುರದಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 23 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಸೋಲಾಪುರದಿಂದ ಕಲಬುರರಿಗೆ ಆಗಮಿಸಿ, ಬೆಳಿಗ್ಗೆ 9.45 ಗಂಟೆಗೆ ಕಲಬುರಗಿ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.