ಸೆಪ್ಟೆಂಬರ್ 17 ರಂದು ಸಚಿವ ಸಂಪುಟ ಸಭೆ ಹಿನ್ನಲೆ: ಮಿನಿ ವಿಧಾನಸೌಧದ ಆವರಣದಲ್ಲಿ ಭದ್ರತಾ ವ್ಯವಸ್ಥೆ-ವಾಹನಗಳ ನಿಲುಗಡೆ ಸ್ಥಳ ಪರಿಶೀಲನೆ
ಕಲಬುರಗಿ:ಸೆ.12: ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಮಿನಿ ವಿಧಾನಸೌಧ ಆವರಣದ ಭಧ್ರತಾ ವ್ಯವಸ್ಥೆ, ಗಣ್ಯರ ವಾಹನಗಳ ನಿಲುಗಡೆ, ಆವರಣದಲ್ಲಿನ ಸ್ವಚ್ಚತೆ ಮುಂತಾದ ಅಂಶಗಳ ಕುರಿತು ಸ್ಥಳ ಪರಿಶೀಲಿಸಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ,ಕಲಬುರಗಿ ನಗರ ಪೆÇಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಜಿಲ್ಲಾಧಿಕಾರಿ ಫೌಜಿಯಾ ಬಿ. ತರನ್ನುಮ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ದೇವಿದಾಸ್ ಇನ್ನಿತರ ಅಧಿಕಾರಿಗಳು ಹಾಜರಿದ್ದರು.