೨೮೦೦ ಕಿ.ಮೀ ಮಾನವ ಸರ್ಪಳಿ ನಿರ್ಮಿಸಿ ಪ್ರಜಾಪ್ರಭುತ್ವ ದಿನಾಚರಣೆಯ ಆಚರಣೆ
ಬೆಂಗಳೂರು, ಸೆ. ೧೨- ಸೆ.೧೫ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುವ ದಿನಾಚರಣೆಯ ಅಂಗವಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ೨೮೦೦ ಕಿ.ಮೀ ಮಾನವ ಸರಪಳಿ ರಚಿಸುವ ಮೂಲಕ ಸಂವಿಧಾನದ ಅಡಿಪಾಯ ಅಂಶಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಕುರಿತು ತಿಳಿಹೇಳುತ್ತ ಈ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಕೆ.ಎ ದಯಾನಂದ ತಿಳಿಸಿದರು
ಜಲ್ಲಾಧಿಕಾರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರು, ಕಳೆದಬಾರಿ ಪ್ರತಿ ಪ್ರತಿಜಿಲ್ಲೆಗಳಲ್ಲಿ,ಸಂವಿಧಾನ ರಥಯತ್ರೆ ಮತ್ತು ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಸಂವಿಧಾನದ ಅರಿವನ್ನು ಮೂಡಿಸಿ ಅಂತರರಾಷ್ಟ್ರೀಯ ಪ್ರಜಾಪ್ರಭುವ ದಿನಾಚರಣೆಯನ್ನು ಆಚರಿಸಲಾಯಿತು ಈಭಾರಿಯು ಈ ದಿನವನ್ನು ಆಚರಿಸಲು ನಿರ್ಧರಿಸಿದ್ದು,ಸುಮಾರು ೨೮೦೦ ಕಿ.ಮೀ ಮಾನವ ಸರಪಳಿ ನಿರ್ಮಿಸಿ, ನಮ್ಮ ಸಂವಿಧಾನದ ಪ್ರಜಾಪ್ರಭುತ್ವದ ಮಹತ್ವ ಮತ್ತು ಜಾಗೃಯನ್ನು ಪ್ರತಿಯೊಬ್ಬರಲ್ಲಿ ಮೂಡಿಸುವುದು ಈ ಕರ್ಯಕ್ರಮದ ಮಖ್ಯ ಉದ್ದೇಶ ಆಗಿದೆ ಎಂದರು.
ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿ ಮೇಲೆ ನಿಂತಿದೆ. ಈ ಭದ್ರ ಬುನಾದಿ ಬಲಿಷ್ಟವಾಗದಿದ್ದರೆ, ಪ್ರಜಾಪ್ರಭುತ್ವವೇ ಬಲಿಷ್ಠವಾಗಲಾರದು ಆದ್ದರಿಂದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಆದರ್ಶಗಳು ಭಾರತೀಯ ಸಂವಿಧಾನದ ಪೀಠಿಕೆಯ ಭಾಗವಾಗಿದೆ. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ದೇಶದ ನಾಗರೀಕರಿಗೆ ವಿಶೇಷವಾಗಿ ಕರ್ನಾಟಕ ನಾಗರೀಕರಿಗೆ ಅರಿವು ಮೂಡಿಸುವುದು ಬಹಳ ಮುಖ್ಯವಾಗಿರುತ್ತದೆ.
ಸಮಾಜ ಕಲ್ಯಾಣ ಇಲಾಖೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ ಸುಮಾರು ೨೮೦೦ ಕಿಲೋಮೀಟರ್ ಮಾನವ ಸರಪಳಿ ರಚನೆಯನ್ನು ಆಯೋಜಿಸಿ ಪ್ರಜಾಪ್ರಭುತ್ವದ ದಿನ ಆಚರಿಸಲು ಸರ್ಕಾರ ತೀರ್ಮಾನಿಸಿದೆ ಎಂದರು ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಹೊಸಕೋಟೆ ಟೋಲ್ ರಸ್ತೆಯಿಂದ ಪ್ರಾರಂಭಿಸಿ ಕೆ.ಆರ್.ಪುರಂ, ಇಂದಿರಾನಗರ, ಎಂ.ಜಿ.ರಸ್ತೆ, ವಿಧಾನಸೌಧ, ಮೈಸೂರು ರಸ್ತೆ, ನಾಯಂಡಹಳ್ಳಿ ಮತ್ತು ಕುಂಬಳಗೂಡು ಮಾರ್ಗವಾಗಿ ಹೆಚ್ಚಾಲ ಬಸ್ ನಿಲ್ದಾಣ ರಾಮನಗರ ಜಿಲ್ಲೆಯ ಪ್ರವೇಶದವರೆಗೂ ಸುಮಾರು ೫೧ ಕಿ.ಮಿ ವರೆಗೂ ಮಾನವ ಸರಪಳಿಯನ್ನು ನಿರ್ಮಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.