ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಸಂಭ್ರಮದಿಂದ ಆಚರಿಸಿ: ಕುಲಕರ್ಣಿ
ಕಮಲನಗರ:ಸೆ.12: ಸೆಪ್ಟಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಯನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂಭ್ರಮದಿಂದ ಆಚರಿಸಬೇಕು ಎಂದು ಕಮಲ್ನಗರ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಅಮಿತ್ ಕುಮಾರ್ ಕುಲಕರಣಿ ತಿಳಿಸಿದರು
ಬುಧವಾರ ಇಲ್ಲಿಯ ತಹಶಿಲ್ ಕಚೇರಿಯಲ್ಲಿ ಆಯೋಜಿಸಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿರುವ ಅವರು, ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಲ್ಲಿ ತಾಲೂಕಿನ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ತಾಲೂಕ ಮಟ್ಟದ ಸಮಾರಂಭದಲ್ಲಿ ಭಾಗವಹಿಸಬೇಕು. ವಿವಿಧ ಶಾಲಾ ಕಾಲೇಜುಗಳಿಂದ ಸಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಬೇಕು .ಈ ಸಭೆಯಲ್ಲಿ ಚರ್ಚೆ ಕೈಗೊಳ್ಳಲಾಯಿತು ತಾಲೂಕ ಪಂಚಾಯತ ಕಾರ್ಯನಿರ್ವಕ ಅಧಿಕಾರಿ ಮಾಣಿಕರಾವ ಪಾಟೀಲ್, ತಾಲೂಕ ಪಂಚಾಯತ ಸಹಾಯಕ ನಿರ್ದೇಶಕ ಹನುಮಂತರಾವ ಕೌಟಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಕುಮಾರ್ ತಂಬಾಕೆ, ಕ ಸಾ ಪ ತಾಲೂಕು ಅಧ್ಯಕ್ಷ ಪ್ರಶಾಂತ್ ಮಠಪತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕಾ ಅಧ್ಯಕ್ಷ ಗಣಪತಿ, ಮಹೇಶ್ ಸಜ್ಜನ್ ಹಾಗೂ ಮಹಾದು ಬರ್ಗೆ ಕುರನ್ನಾಳೆ, ಯಶ್ವಂತ್ ಬಿರಾದಾರ್ ಎಸ್ ಎನ್ ಶಿವಣಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.