ಒಂದು ಸಮುದಾಯದಿಂದ ಉದ್ದೇಶ ಪೂರ್ವಕ ದಾಂಧಲೆ
ಬೆಂಗಳೂರು.ಸೆ.೧೨- ಮಂಡ್ಯದ ನಾಗಮಂಗಲದಲ್ಲಿ ಸಂಭವಿಸಿದ ಕೋಮುಗಲಭೆ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕ ದಾಂಧಲೆ ನಡೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯೆ ಸಿ.ಟಿ.ರವಿ ತಿಳಿಸಿದ್ದಾರೆ.
ಗಣಪತಿ ವಿಸರ್ಜೆನೆಗೆ ತೆರೆಳುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ನಾಗಮಂಗಲದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿ ಘರ್ಷಣೆ ಸಂಭವಿಸಿತ್ತು. ಅಂಗಡಿ ಮುಂಗಟ್ಟುಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸಿ.ಟಿ. ರವಿ, ಉದ್ದೇಶಪೂರ್ವಕವಾಗಿ ಒಂದು ಸಮುದಾಯದ ಪುಂಡರು ದಾಂಧಲೆ ನಡೆಸಿದ್ದಾರೆ. ಪೆಟ್ರೋಲ್ ಬಾಂಬ್ ಎಸೆದು ಕೋಮುಗಲಭೆಗೆ ಪ್ರಚೋದನೆ ನೀಡಿದ ಮುಸ್ಲಿಮ್ ಗಲಭೆಕೋರರನ್ನು ಬಂಧಿಸುವುದನ್ನು ಬಿಟ್ಟು ಸಮಿತಿಯ ಸದಸ್ಯರನ್ನು ಬಂಧಿಸಿದ ಪೋಲೀಸರ ಕೃತ್ಯ ಅಕ್ಷಮ್ಯ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. ಕೊಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.