ಮಾವುತರು, ಕಾವಾಡಿಗಳ ಆರೋಗ್ಯ ತಪಾಸಣೆ
ಸಂಜೆವಾಣಿ ನ್ಯೂಸ್
ಮೈಸೂರು:ಸೆ.12:-ಅರಮನೆ ಅಂಗಳದಲ್ಲಿ ಬುಧÀವಾರ ಗಜಪಡೆಯೊಂದಿಗೆ ಆಗಮಿಸಿರುವ ಮಾವುತರು ಮತ್ತು ಕಾವಾಡಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಆರೋಗ್ಯ ತಪಾಸಣೆ ಕಾರ್ಯ ನಡೆಯಿತು.
ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಮೈಸೂರಿನ ನಾರಾಯಣ ಆಸ್ಪತ್ರೆ ವತಿಯಿಂದ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ಡಿಸಿಎಫ್ ಡಾ.ಪ್ರಭುಗೌಡ ವೈದ್ಯಕೀಯ ಶಿಬಿರಕ್ಕೆ ಚಾಲನೆ ನೀಡಿದರು. ಸುಮಾರು 150ಕ್ಕೂ ಹೆಚ್ಚು ಮಾವುತರು ಹಾಗೂ ಕಾವಾಡಿಗರ ಕುಟುಂಬದ ಸದಸ್ಯರಿಗೆ ಇಸಿಜಿ, ಎಕೋ, ರಕ್ತದೊತ್ತಡ, ಸಕ್ಕರೆ ಕಾಯಿಲೆ, ರಕ್ತದ ಗುಕ್ಲೋಸ್ ಮಟ್ಟ ಪರೀಕ್ಷೆಗಳನ್ನು ನಡೆಸಲಾಯಿತು. ಜತೆಗೆ ವೈದ್ಯರೊಂದಿಗೆ ಆಪ್ತ ಸಮಾಲೋಚನೆ ಮಾಡಲಾಯಿತು.
ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ ಮಾತನಾಡಿ, ಸಾಮಾನ್ಯವಾಗಿ ಕಾಡಿನಲ್ಲಿ ವಾಸಿಸುವ ಮಾವುತರು ಹಾಗೂ ಕಾವಾಡಿಗರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವುದಿಲ್ಲ. ಇದೀಗ ದಸರಾಗೆ ಆಗಮಿಸಿರುವ ಆನೆ ಪಾಲಕರಿಗೆ ಉಚಿತ ಆರೋಗ್ಯ ಸೇವೆ ಸಿಕ್ಕಿರುವುದು ಖುಷಿಯ ವಿಚಾರ ಎಂದು ಹೇಳಿದರು.
ಶಿವಿರದಲ್ಲಿ ನಾರಾಯಣ ಆಸ್ಪತ್ರೆಯ ಉಪ ವೈದ್ಯಕೀಯ ಅಧೀP್ಷÀಕ ದೀಪಕ್ ಬೆಟದೂರ್, ಆರ್‍ಎಫ್‍ಒ ಸಂತೋಷ್ ಸೇರಿದಂತೆ ಇತರರು ಭಾಗವಹಿಸಿದ್ದರು.