ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
ಸಂಜೆವಾಣಿ ನ್ಯೂಸ್
ಮೈಸೂರು:ಸೆ.12:- ನಗರದ ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ಬುಧವಾರ ಬೆಳಗ್ಗೆ ಆವರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.
ಅರಣ್ಯ ಭÀವನದ ಆವರಣದಲ್ಲಿ ಲೇಟ್ ವೆಂಕಟಸ್ವಾಮಿ ಉದ್ಯಾನದಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ನಗರ ಪೆÇಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಚಾಮರಾಜೇಂದ್ರ ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಮಹೇಶ್ ಕುಮಾರ್ ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಿದರು.
ಬಳಿಕ ಮಾತನಾಡಿದ ನಗರ ಪೆÇಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಪ್ರಸ್ತುತ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷಗಳು ಹೆಚ್ಚುತ್ತಿದ್ದು, ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯ ಜವಾಬ್ದಾರಿ ಮತ್ತು ಪಾತ್ರ ಮಹತ್ವದ್ದಾಗಿದೆ ಎಂದರು.
ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಮಹೇಶ್‍ಕುಮಾರ್ ಮಾತನಾಡಿ, ರಾಷ್ಟ್ರೀಯ ಅರಣ್ಯ ನೀತಿಯಲ್ಲಿ ಸುಮಾರು ಶೇ.33ರಷ್ಟು ಭೌಗೋಳಿಕ ಪ್ರದೇಶದಲ್ಲಿ ಅರಣ್ಯ ಇರಬೇಕು ಎಂಬ ನಿಯಮವಿದೆ. ಆದರೆ, ಭಾರತ, ಕರ್ನಾಟಕದಲ್ಲಿ ಕೇವಲ ಶೇ.21ರಷ್ಟು ಅರಣ್ಯ ಮಾತ್ರ ಇದೆ ಎಂದು ಬೇಸರ ವ್ಯಕ್ತಪಡಿಸಿದರು.
ಮೈಸೂರು ವಿಭಾಗದ ಡಿಸಿಎಫ್ ಡಾ.ಕೆ.ಎನ್.ಬಸವರಾಜು, ಕಾರ್ಯ ಯೋಜನೆ ಡಿಸಿಎï ಲಿಂಗರಾಜು, ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಐ.ಬಿ. ಪ್ರಭುಗೌಡ, ಅರಣ್ಯ ಸಂಚಾರಿದಳದ ಡಿಸಿಎಫ್ ಚಂದ್ರಶೇಖರಗೌಡ ಸಿ. ಪಾಟೀಲ, ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ಶಂಕರೇಗೌಡ, ಎಚ್.ಡಿ.ಕೋಟೆ ಎಸಿಎಫ್ ಅಭಿಷೇಕ್, ಎಸಿಎಫ್ ಜಿ.ರವೀಂದ್ರ, ವಲಯ ಅರಣ್ಯಾಧಿಕಾರಿ ಮುಹಮ್ಮದ್ ಜೀಷಾನ್, ಉಪ ವಲಯ ಅರಣ್ಯಾಧಿಕಾರಿ ಸಂಜೀವ್ ಪಾಟೀಲ್ ಸೇರಿದಂತೆ ಅಧಿಕಾರಿಗಳು ಇದ್ದರು.