ಸಿಂಹದ ಮರಿ ಸೈನ್ಯದಿಂದ ರಕ್ತದಾನ ಶಿಬಿರ
ಕೊಲ್ಹಾರ:ಸೆ.೧೨: ರಕ್ತದಾನ ಮಾಡಲು ಮುಂದೆ ಬರುವ ಮೂಲಕ ರಕ್ತದ ಕೊರತೆಯನ್ನು ನೀಗಿಸಬೇಕು ಎಂದು ಸಂಘ ಸದಸ್ಯ ರಾಜು ತಳವಾರ ಹೇಳಿದರು.
ಪಟ್ಟಣದ ಸಿಂಹದ ಮರಿ ಸೈನ್ಯ ಗಜಾನನ ಯುವಕ ಮಂಡಳಿಯಿAದ ಗಣೇಶೋತ್ಸವ ಪ್ರಯುಕ್ತ ಬುಧವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
‘ರಕ್ತ ಹೀನತೆ, ವಿವಿಧ ಕಾಯಿಲೆಗಳಿಂದ ಬಳಲುವವರು ಮತ್ತು ಅಪಘಾತದಂತಹ ತುರ್ತು ಸಂದರ್ಭಗಳನ್ನು ನಿಭಾಯಿಸಲು ರಕ್ತ ಸಂಗ್ರಹದ ಅಗತ್ಯವಿರುತ್ತದೆ. ಹೀಗಾಗಿ ಪರೋಪಕಾರದ ಉದ್ದೇಶವುಳ್ಳ ಇಂತಹ ರಕ್ತದಾನ ಶಿಬಿರಗಳು ಹೆಚ್ಚೆಚ್ಚು ನಡೆಯಬೇಕು’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಂಹದ ಮರಿ ಸೈನ್ಯದ ಪದಾಧಿಕಾರಿಗಳು ಸಹಿತ ಅನೇಕರು ಉಪಸ್ಥಿತರಿದ್ದರು.