ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡದಿರಿ : ಕೋಸಂಬೆ
ಸಂಜೆವಾಣಿ ವಾರ್ತೆ
ಔರಾದ್ :ಸೆ.೧೨: ಪ್ರಸುತ್ತ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಮಕ್ಕಳ ಮುಗ್ಧತೆ, ನಿಷ್ಕಲ್ಮಷ ಪ್ರೀತಿ ಕಣ್ಮರೆಯಾಗುತ್ತಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಕಳವಳ ವ್ಯಕ್ತಪಡಿಸಿದರು.
ಬುಧವಾರ ತಹಸೀಲ್ ಕಛೇರಿ ಸಭಾಂಗಣದಲ್ಲಿ ಮಕ್ಕಳ ಸಂರಕ್ಷಣಾ ವೇಳೆ ವಿಷಯಗಳ ಕುರಿತು ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಿಗಿರುವ ಸಾಮಾನ್ಯ ಹಕ್ಕುಗಳ ಕುರಿತು ಮಾಹಿತಿ ಕೆuಟಿಜeಜಿiಟಿeಜರತೆ ಇದ್ದು, ಇದರ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಂಡು ಕೆಲಸ ಮಾಡುವಂತೆ ಸೂಚಿಸಿದರು.
ತಾಲೂಕಿನ ಕೌಡಗಾಂವ, ಸಂತಪೂರ್, ವಡಗಾಂವ, ಚಿಂತಾಕಿ ಹಾಗೂ ಸುಂದಾಳ ಗ್ರಾಮದ ವಸತಿ ಶಾಲೆ, ವಸತಿ ನಿಲಯಗಳು, ಸರ್ಕಾರಿ ಶಾಲೆಗಳು, ಗ್ರಾಪಂ ಕಛೇರಿಗಳು ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಸೌಲಭ್ಯಗಳ ವಿಚಾರದಲ್ಲಿ ಮಾಡುತ್ತಿರುವ ಅನ್ಯಾಯದ ಕುರಿತು ತರಾಟೆಗೆ ತೆಗೆದುಕೊಂಡರು.