ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳುಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕಲಬುರಗಿ:ಸೆ.11: 2024-25ನೇ ಶೈಕ್ಷಣಿಕ ಸಾಲಿಗೆ ತಾಲೂಕಾ ಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ಕಲಬುರಗಿ ತಾಲೂಕಿನ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 14 ಮತ್ತು 17 ವರ್ಷದೊಳಗಿನ ಬಾಲಕರು ಹಾಗೂ 17 ವರ್ಷದೊಳಗಿನ ಬಾಲಕಿಯರು ಕಬ್ಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಅದೇ ರೀತಿ 14 ವರ್ಷದೊಳಗಿನ ಬಾಲಕಿಯರು ಸಹ ಕಬ್ಬಡ್ಡಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗಾಗಿ ಸಿಬ್ಬಂದಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಎಂ.ಎಸ್.ಅಲ್ಲಾಬಕಾಷ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.