ಹಾರಕೂಡ, ನಾಲವಾರ ಶ್ರೀಗಳಿಗೆ ಕಲ್ಯಾಣ ಕರ್ನಾಟಕ ಪ್ರಶಸ್ತಿಡಾ.ಸಾರಂಗಧರ ಶ್ರೀ ಪಟ್ಟಾಧಿಕಾರ ದಶಮಾನೋತ್ಸವ 21 ರಂದು
ಕಲಬುರಗಿ,ಸೆ.11-ಚನ್ನವೀರ ಶಿವಯೋಗಿಗಳ 70ನೇ ಪುಣ್ಯಸ್ಮರಣೆ ಹಾಗೂ ಶ್ರೀಶೈಲ ಸಾರಂಗ ಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮಿಗಳ ಪಟ್ಟಾಧಿಕಾರ ದಶಮಾನೋತ್ಸವ, ಪೂಜ್ಯರ ಜನ್ಮ ದಿನಾಚರಣೆ ಸಮಾರಂಭ ಸೆ.21ರಂದು ಬೆಳಗ್ಗೆ 11ಕ್ಕೆ ಶಹಾಬಜಾರದಲ್ಲಿರುವ ಸುಲಫಲ ಮಠದಲ್ಲಿ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ್ ರೇವೂರ, ಉಪಾಧ್ಯಕ್ಷ ದೇವೇಂದ್ರಗೌಡ ಗೌಡಗೇರಾ ತಿಳಿಸಿದ್ದಾರೆ.
ಹಾರಕೂಡದ ಡಾ.ಚನ್ನವೀರ ಶಿವಾಚಾರ್ಯರು, ನಾಲವಾರದ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯರಿಗೆ ಶ್ರೀಮಠದಿಂದ ಪ್ರತಿಷ್ಠಿತ ಕಲ್ಯಾಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನಿಡುಮಾಮಡಿಯ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯ, ಭಾಲ್ಕಿಯ ಡಾ.ಬಸವಲಿಂಗ ಪಟ್ಟz್ದÉೀವರ ನೇತೃತ್ವ ಹಾಗೂ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನ ಡಾ.ದಾಕ್ಷಾಯಿಣಿ ಅಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ. ಸೊನ್ನದ ಡಾ.ಶಿವಾನಂದ ಸ್ವಾಮೀಜಿ, ಯಡ್ರಾಮಿಯ ಸಿದ್ದಲಿಂಗ ಸ್ವಾಮೀಜಿ ಸಮ್ಮುಖ ವಹಿಸುವರು ಎಂದು ಮಾಹಿತಿ ನೀಡಿದ್ದಾರೆ.
ನೂತನ ಮಹಾದ್ವಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹಾಗೂ ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸುವರು. ಕೆಕೆಆರ್‍ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಪೆÇಲೀಸ್ ಆಯುಕ್ತ ಡಾ.ಶರಣಪ್ಪ ಢಗೆ, ಶಾಸಕರಾದ ಎಂ.ವೈ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ಕನ್ನಿಜ್ ಫಾತಿಮಾ, ತಿಪ್ಪಣ್ಣಪ್ಪ ಕಮಕನೂರ, ಬಸವರಾಜ ಮತ್ತಿಮಡು, ಡಾ.ಬಿ.ಜಿ.ಪಾಟೀಲ್, ಜಗದೇವ ಗುತ್ತೇದಾರ್, ಸುನೀಲ್ ವಲ್ಲ್ಯಾಪುರೆ, ಚಂದ್ರಶೇಖರ ಪಾಟೀಲ್ ಇತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.