ಸದೃಢ ದೇಶ ನಿರ್ಮಾಣಕ್ಕೆ ಹಾಗೂ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರ : ಸಚಿವ ಶರಣಬಸಪ್ಪಗೌಡ ದರ್ಶನಾಪುರ
ಯಾದಗಿರಿ : ಸೆ.11 : ಸದೃಢ ದೇಶದ ನಿರ್ಮಾಣಕ್ಕೆ ಹಾಗೂ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಶಿಕ್ಷಕರು ಮಕ್ಕಳ ಉತ್ತಮ ಶಿಕ್ಷಣಕ್ಕೆ ಶ್ರಮಿಸಿ ಜಿಲ್ಲೆಗೆ ಹೆಚ್ಚಿನ ಫಲಿತಾಂಶ ತರುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ವಿಧಾನ ಪರಿಷತ್ತು ಶಾಸಕ ಚಂದ್ರಶೇಖರ ಬಿ ಪಾಟೀಲ್ ಮಾತನಾಡಿ, ಮನುಷ್ಯ ಹೃದಯ ಎಷ್ಟು ಮುಖ್ಯವೋ ಹಾಗೆಯೇ ಸುಂದರ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಅವಶ್ಯಕತೆ ಬಹಳ ಇದೆ ಎಂದರು. ಸರ್ಕಾರಿ ನೌಕರರಿಗೆ ಇರುವ ಪಿಂಚಣಿ ವ್ಯವಸ್ಥೆಯ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಶಿಕ್ಷಕಿ ಸಂಗೀತಾ ದೇಸಾಯಿ, ಸುರಪುರ ಆರ್ ಎಮ್ ಎಸ್ ಎ ದೇವಿಕೇರಾ ಶಾಲೆಯ ಶಿಕ್ಷಕ ತಿಪ್ಪೇಸ್ವಾಮಿ, ಯಾದಗಿರಿ ತಾಲೂಕಿನ ರಾಮಸಮುದ್ರ ಪ್ರೌಢಶಾಲೆಯ ಶಿಕ್ಷಕ ರಾಜಶೇಖರ ಗೌಡ ಇವರಿಗೆ ವೇದಿಕೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.