ಮುರಾರ್ಜಿದೇಸಾಯಿ ವಸತಿ ಶಾಲೆ ಅವ್ಯವಸ್ಥೆ ಆರೋಪ, ಸಚಿವ ಖಂಡ್ರೆ ಭೇಟಿ
ಭಾಲ್ಕಿ: ಸೆ.11:ತಾಲೂಕಿನ ಕೋನಮೆಳಕುಂದಾ ಗ್ರಾಮದಲ್ಲಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ ಇದೆ ಎಂದು ಸ್ಥಳೀಯರಿಂದ ಬಂದ ಆರೋಪದ ಹಿನ್ನಲೆಯಲ್ಲಿ ಸಚಿವ ಈಶ್ವರ ಖಂಡ್ರೆಯವರು ಸೋಮವಾರ ವಸತಿ ಶಾಲೆಗೆ ಭೆಟಿ ನೀಡಿ ಮಾಹಿತಿ ಕಲೆಹಾಕಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಖುದ್ದಾಗಿ ಭೇಟಿಮಾಡಿ ವೈಯಕ್ತಿಕವಾಗಿ ವಿಚಾರಿಸಿದ್ದೇನೆ. ಊಟ, ವಸತಿ, ಶಿಕ್ಷಣದಬಗ್ಗೆ ಎಲ್ಲಾ ವಿದ್ಯಾರ್ಥಿಗಳು ಸಕಾರಾತ್ಮಕವಾಗಿ ಉತ್ತರ ನೀಡಿದ್ದಾರೆ. ಶಾಲಾ ಆವರಣ ಮತ್ತು ಅಡುಗೆಕೋಣೆಗಳನ್ನು ಪರಿಶೀಲಿಸಿದ್ದೇನೆ, ನನಗೆ ಇಲ್ಲಿ ಯಾವುದೇ ತರಹದ ಅವ್ಯವಸ್ಥೆ ಕಂಡು ಬಂದಿಲ್ಲ. ಹೆಚ್ಚಿನದೇನಾದರು ಇದ್ದರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಭೇಟಿ ನೀಡಲು ತಿಳಿಸುತ್ತೇನೆ. ಅಂತಹ ಅವ್ಯವಸ್ಥೆ ಏನಾದರೂ ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಮತ್ತು ಸ್ಥಳೀಯರು ಹಾಜರಿದ್ದರು.