ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ
ಧಾರವಾಡ,ಸೆ11: ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಧಾರವಾಡ ಡಿಮ್ಹಾನ್ಸ್‍ದಲ್ಲಿ ಖ್ಯಾತ ಮನೋವೈದ್ಯ ಪೆÇ್ರ. ಸಿ.ಆರ್.ಚಂದ್ರಶೇಖರ ಅವರಿಂದ ವಿಶೇಷ ಉಪನ್ಯಾಸ ಜರುಗಿತ್ತು.
ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ, ಧಾರವಾಡ, ಭಾರತೀಯ ಮನೋವೈದ್ಯಕೀಯ ಸಂಘ(ಕರ್ನಾಟಕ ಶಾಖೆ), ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಹುಬ್ಬಳ್ಳಿ, ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಧಾರವಾಡ, ಜನತಾ ಶಿಕ್ಷಣ ಸಮಿತಿ, ವಿದ್ಯಾಗಿರಿ ಧಾರವಾಡ, ಸೃಷ್ಟಿ ವಿಜ್ಞಾನ ಪದವಿ ಪೂರ್ವ ಕಾಲೇಜು ಧಾರವಾಡ, ಕೆ.ಇ.ಬೋರ್ಡ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಧಾರವಾಡ, ಸ್ವಾಮಿವಿವೇಕಾನಂದ ಯೂತ್ ಮೂವಮೆಂಟ್, ಧಾರವಾಡ ಇವರ ಸಹಯೋಗದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಡಿಮ್ಹಾನ್ಸ್‍ನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪೆÇ್ರ. ಸಿ.ಆರ್.ಚಂದ್ರಶೇಖರ ಅವರು ಮಾತನಾಡಿ, ಆತ್ಮಹತ್ಯೆ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ತುಂಬಾ ಮಹತ್ವ. ಆದ್ದರಿಂದ ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಮಾಡಬೇಕೆಂದು ಹೇಳಿದರು.
ಪಾಲಕರು ತಮ್ಮ ಮಕ್ಕಳ ಬಗ್ಗೆ ಜಾಗೃತಿ ವಹಿಸಬೇಕು. ಉತ್ತಮ ಹವ್ಯಾಸಗಳನ್ನು ರೂಪಿಸಿಕೊಳ್ಳಲು ಅವರಿಗೆ ಉತ್ತಮ ಮಾರ್ಗದರ್ಶನ ನೀಡಬೇಕು. ಕುಟುಂಬದಲ್ಲಿ ಒಳ್ಳೆಯ ವಾತಾವರಣ ಇರುವಂತೆ ನೋಡಿಕೊಳ್ಳಬೇಕು. ಕೌಟಂಬಿಕ ಸಮಸ್ಯೆಗಳು, ಆರೋಗ್ಯ ಸಮಸ್ಯೆಗಳು, ಸೋಲುಗಳು, ಹತಾಶೆ, ಹಣಕಾಸಿನ ಸಮಸ್ಯೆಗಳು ಆತ್ಮಹತ್ಯೆಗೆ ಕಾರಣಗಳಾಗಿವೆ ಎಂದು ಅವರು ತಿಳಿಸಿದರು.
ಆತ್ಮಹತ್ಯೆ ತಡೆಗಟ್ಟಬಹುದಾದ ವಿಷಯ. ಸರಿಯಾದ ಕಾರಣಗಳನ್ನು ತಿಳಿದುಕೊಂಡು, ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿರುವ ವ್ಯಕ್ತಿಗಳಿಗೆ ಅಗತ್ಯ ಆಪ್ತ ಸಮಾಲೋಚನೆ, ಸಹಾಯ ಮಾಡಬೇಕೆಂದು ಅವರು ಹೇಳಿದರು.
ಕೆಲವರು ತಮಗೆ ಅತಿಯಾದ ಕಷ್ಟಗಳು ಬಂದಾಗ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ಮ ಮಾಡುತ್ತಾರೆ. ಅತಿ ಪುರಾತನ ಕಾಲದಿಂದಲೂ ಆತ್ಮಹತ್ಯೆ ಇದೆ, ಭೂ ಪ್ರವೇಶ, ಅಗ್ನಿ ಪ್ರವೇಶ, ಜಲಪ್ರವೇಶ ಹಿಗೇ ಇತರ ಆಯಾಮಗಳಲ್ಲಿ ಪುರಾತನ ಕಾಲದಲ್ಲಿ ಪ್ರಾಣತ್ಯಾಗ ಮಾಡುತ್ತಿದ್ದರು. ಆತ್ಮಹತ್ಯೆ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯವೆಂದು ಅವರು ಅಭಿಪ್ರಾಯ ಪಟ್ಟರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ, ಯುವ ಸಮೂಹದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ. ಮನೋವೈದ್ಯರ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಂಡು ಆತ್ಮಹತ್ಯೆ ಯೋಚನೆಗಳಿಂದ ಹೊರಬರಬೇಕು ಮತ್ತು ಆತ್ಮವಿಶ್ವಾಸದಿಂದ ಬದುಕಿನಲ್ಲಿ ಸಾಧನೆ ಮಾಡಬೇಕು. ಆತ್ಮಹತ್ಯೆ ತಡೆಗಟ್ಟಲು ಎಲ್ಲರ ಸಹಕಾರಬೇಕು. ನಿರ್ಲಕ್ಷ್ಯವಹಿಸದೆ ಆತ್ಮಹತ್ಯೆ ಘಟನೆಗಳನ್ನು ತಡೆಗಟ್ಟಲು ಎಲ್ಲರೂ ಮುಂದಾಗಬೇಕೆಂದು ಅವರು ಹೇಳಿದರು.
ವೈದ್ಯಕೀಯ ಮತ್ತು ಅರೆವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಘಟನೆಗಳು ಹೆಚ್ಚಾಗದಂತೆ ಎಚ್ಚರವಹಿಸಬೇಕಾಗಿದೆಯೆಂದು ಡಾ. ಸಿ.ಆರ್.ಚಂದ್ರಶೇಖರ ಅವರು ಸಲಹೆ ನೀಡಿದರು.
ಆತ್ಮಹತ್ಯೆ ತಡೆಗಟ್ಟುವ ಕುರಿತು ವಿದ್ಯಾರ್ಥಿಗಳಿಗೆ ಪೆÇಸ್ಟರ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ಸಮಾರಂಭದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾರತೀಯ ಮನೋವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ನೂತನ ಅಧ್ಯಕ್ಷ, ಜಿಮ್ಸ್ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಸೋಮಶೇಖರ ಬಿಜ್ಜಳ, ಡಿಮ್ಹಾನ್ಸ್‍ನ ನಿರ್ದೇಶಕ ಡಾ. ಅರುಣಕುಮಾರ ಸಿ, ಎಸ್.ವಿ.ವಾಯ್.ಸಂಸ್ಥೆಯ ನಿರ್ವಹಣಾ ಮಂಡಳಿಯ ನಿರ್ದೇಶಕ ಡಾ.ವಿ.ಎಮ್.ದೇಶಪಾಂಡೆ, ಡಿಮ್ಹಾನ್ಸ್ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ರಾಘವೇಂದ್ರ ನಾಯಕ್, ಡಿಮ್ಹಾನ್ಸ್‍ನ ಶೂಶ್ರೂμÁಧಿಕಾರಿ ಲವ್ಹಲಿ ಮಾಥ್ಯೂಸ್, ಮನೋವೈದ್ಯ ಡಾ.ಆನಂದ ಪಾಂಡುರಂಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಡಾ.ಶ್ರೀಧರ ಕುಲಕರ್ಣಿ ಪ್ರಾರ್ಥಿಸಿದರು. ಮನೋವೈದ್ಯಕೀಯ ಪ್ರಾಧ್ಯಾಪಕ ಡಾ.ರಂಗನಾಥ ಕುಲಕರ್ಣಿ ಅತಿಥಿ ಪರಿಚಯ ಮಾಡಿದರು. ಪ್ರಶಾಂತ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಅಶೋಕ ಕೋರಿ ವಂದಿಸಿದರು.
ಡಿಮ್ಹಾನ್ಸ್ ಸಂಸ್ಥೆಯ ವಿವಿಧ ವಿಭಾಗದ ಬೋಧಕ ಹಾಗೂ ಬೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.