ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಗೊಳಸಂಗಿಗೆ ಸನ್ಮಾನ
ಸಂಜೆವಾಣಿ ವಾರ್ತೆ,
ವಿಜಯಪುರ,ಸೆ.೧೧:ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ, ಹಿರಿಯ ಸಾಹಿತಿ ಡಾ. ಅರ್ಜುನ ಗೊಳಸಂಗಿ ಅವರಿಗೆ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ (ರಿ) ವತಿಯಿಂದ ಸಂಸ್ಥೆಯ ನೂತನ ಕಚೇರಿಯಲ್ಲಿ ಸಾಹಿತಿ, ಪತ್ರಕರ್ತ ಕಲ್ಲಪ್ಪ ಶಿವಶರಣ ವಿರಚಿತ ಕಲ್ಲು ಮನಸ್ಸು ಕೃತಿ ನೀಡಿ ಹಾಗೂ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ ಅಧ್ಯಕ್ಷ ಕಲ್ಲಪ್ಪ ಶಿವಶರಣ, ತೆರಿಗೆ ಇಲಾಖೆಯ ಅಧಿಕಾರಿ ಸುರೇಶ ಗೊಳಸಂಗಿ, ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ, ಲಕ್ಷ್ಮಣ ಲೋಗಾಂವಿ, ಸಂಶೋಧಕ ಲಾಯಪ್ಪ ಇಂಗಳೆ, ಪತ್ರಕರ್ತ ಉಮೇಶ ಶಿವಶರಣ, ಸಾಗರ ಲಾಯದಗುಂದಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.