ಶರಣರ ಕಾಯಕ ಭೂಮಿಯಿಂದ ಸೆ.೧೫ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ
ಬಸವಕಲ್ಯಾಣ: ಸೆ.೧೧:೧೨ನೇ ಶತಮಾನದಲ್ಲಿ ಬಸವಾದಿ ಶಿವಶರಣರ ಕಾಯಕ ಭೂಮಿಯಾದ ಬಸವಕಲ್ಯಾಣದ ಅನುಭವ ಮಂಟಪದಿAದ ವಿಶ್ವಕ್ಕೆ ವಚನ ಸಾಹಿತ್ಯದ ಮೂಲಕ ಮಾನವೀಯ ಮೌಲ್ಯಗಳು ಬಿತ್ತಿದ ಪವಿತ್ರ ಹಾಗೂ ಪುಣ್ಯದ ನೆಲದಿಂದ ಸೆ-೧೫ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಳ್ಳಲಾಗುತ್ತಿದ್ದು ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಕರೆ ನೀಡಿದರು.
ನಗರದ ಹೊರವಲಯದಲ್ಲಿರುವ ಬಿಕೆಡಿಬಿ ಸಭಾಂಗಣದಲ್ಲಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಂಗಳವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಸೆ-೧೫ರಂದು ಬೆಳಿಗ್ಗೆ ೮-೩೦ರಿಂದ ೯-೩೦ರ ವರೆಗೆ ಬಸವಕಲ್ಯಾಣದ ಅನುಭವ ಮಂಟಪದಿAದ ಹುಮನಾಬಾದ ತಾಲೂಕಿನ ಹಳ್ಳಿಖೇಡ (ಕೆ) ಗ್ರಾಮದ ವರೆಗೆ ಸುಮಾರು ೪೫ ಕಿಮಿ ವರೆಗೆ ಮಾನವ ಸರಪಳಿ ನಿರ್ಮಿಸಿ ಈ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಒಂದು ಕಿ.ಮಿಗೆ ೭೭೦ ಜನರು ಬೇಕಾಗುತ್ತದೆ ಒಟ್ಟಾರೆಯಾಗಿ ೪೫ ಕಿಮಿ ವರೆಗೂ ಎಲ್ಲರೂ ಮಾನವ ಸರಪಳಿ ನಿರ್ಮಿಸಲು ಬೇಕಾದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ ಒಟ್ಟಾರೆಯಾಗಿ ಪ್ರತಿ ಮೂರು ಕಿಮಿ ವರೆಗೆ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ೧೪ ಜನರನ್ನು ನೇಮಿಸಲಾಗುತ್ತಿದೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ನೇಮಿಸಿದ ಸ್ಥಳದಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ಸಭೆಯಲ್ಲಿ ಸೂಚನೆ ನೀಡಿದರು.
ಈ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳು, ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲಾಗುತ್ತಿದ್ದು ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಸಾಥ್ ನೀಡಬೇಕು ಅಲ್ಲದೆ ಇದರಲ್ಲಿ ಭಾಗವಹಿಸಲು ವಿವಿಧೆಡೆಯಿಂದ ಆಗಮಿಸುವ ಜನರನ್ನು ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು ಸಂಘ-ಸAಸ್ಥೆಯ ಪದಾಧಿಕಾರಿಗಳು ಪಟ್ಟಿ ನೀಡಿದರೆ ಅವರನ್ನು ಕರೆತರುವ ವ್ಯವಸ್ಥೆ ಮಾಡಲಾಗುವದು ಎಂದು ತಿಳಿಸಿದರು.
ಬೆಳಿಗ್ಗೆ ಅನುಭವ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವದು. ಅದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಚಟುವಟಿಕೆಗಳು ಆಯೋಜಿಸಲಾಗುವದು. ಇದರಲ್ಲಿ ಪಾಲ್ಗೊಂಡ ಜನರಿಗೆ, ವಿದ್ಯಾರ್ಥಿಗಳು ಬೆಳಗಿನ ಉಪಹಾರ, ನೀರಿನ ವ್ಯವಸ್ಥೆ ಕಲ್ಪಿಸಲಾಗುವದು ಎಂದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಗಿರೀಶ ಬಧೋಲೆ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತ ಪ್ರಕಾಶ ಕುದರಿ, ಹುಮನಾಬಾದ ಡಿವೈಎಸ್‌ಪಿ ಜೆ.ಎಸ್ ನ್ಯಾಮೇಗೌಡ, ತಹಸೀಲ್ದಾರರಾದ ಶಾಂತಗೌಡ ಬಿರಾದಾರ ಹಾಗೂ ಶಿವಾನಂದ ಮೇತ್ರೆ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಬಸವಕಲ್ಯಾಣ, ಭಾಲ್ಕಿ, ಹುಮನಾಬಾದ ಹಾಗೂ ಚಿಟಗುಪ್ಪ ತಾಲೂಕಿನ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.