ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಗೆ ಸಕಲ ಸಿದ್ಧತೆ
ಅಫಜಲಪುರ:ಸೆ.10: ಸೆಪ್ಟಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ ಸಂಜೀವಕುಮಾರ ದಾಸರ್ ತಿಳಿಸಿದರು.
ಪಟ್ಟಣದ ತಹಸೀಲ್ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸೆಪ್ಟೆಂಬರ್ 17ರ ಪ್ರಯುಕ್ತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಅಂದಿನ ದಿನ ಸರ್ಕಾರಿ ಮತ್ತು ಅರೆ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಬೆಳಿಗ್ಗೆ 7:30 ಗಂಟಗೆ ತಮ್ಮ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ 8.45 ಕ್ಕೆ ತಹಸೀಲ್ ಕಚೇರಿ ಆವರಣದಲ್ಲಿ ನೆರವೇರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಹಾಗೂ ವಿಶ್ವಕರ್ಮ ಜಯಂತಿ ಪ್ರಯುಕ್ತ ಫೆÇೀಟೋ ಪೂಜೆಯನ್ನು 8.15 ಕ್ಕೆ ನೆರವೇರಿಸಲಾಗುವುದು ಎಂದು ತಿಳಿಸಿದ ಅವರು ಇದೇ ವೇಳೆ ಸಂಬಂಧಪಟ್ಟ ವಿವಿಧ ಇಲಾಖೆಯ ಮತ್ತು ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಹಲವು ಜವಾಬ್ದಾರಿಗಳನ್ನು ನೀಡಿ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಮುನ್ನೆಚ್ಚರಿಕೆ ನಿಗಾ ವಹಿಸಬೇಕು ಹಾಗೂ ಅಂದಿನ ದಿನ ಎಲ್ಲರೂ ಕಡ್ಡಾಯವಾಗಿ ಭಾಗಿಯಾಗಬೇಕೆಂದು ಸೂಚನೆ ನೀಡಿದ ಅವರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗುವುದಾಗಿ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.