ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಜಿಲ್ಲಾ ಮಟ್ಟದ ಅಂತರಾಷ್ಟಿçÃಯ ಸಾಕ್ಷರತಾ ದಿನ ಆಚರಣೆ
ಸಂಜೆವಾಣಿ ವಾರ್ತೆ,
ವಿಜಯಪುರ,ಸೆ.೧೦: ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಸೆ.೯ರಂದು ಅಂತರರಾಷ್ಟಿçÃಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.
ಜಿಲ್ಲಾ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ ಉಮಾದೇವಿ ಸೊನ್ನದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿಯ ಅನಕ್ಷರಸ್ಥರನ್ನು ಗರುತಿಸಿ, ಅಕ್ಷರಸ್ಥರನ್ನಾಗಿ ಮಾಡುವ ಉಲ್ಲಾಸ್ ಎನ್‌ಐಎಲ್‌ಪಿ, ೧೦೦೦ ಸಂಪೂರ್ಣ ಗ್ರಾಮ ಪಂಚಾಯತಿ ಹಾಗೂ ಲಿಂಕ್ ಡಾಕ್ಯುಮೆಂಟ್ ಸಾಕ್ಷರತಾ ಕಾರ್ಯಕ್ರಮಗಳ ಮೂಲಕ ಸಾಕ್ಷರರನ್ನಾಗಿ ಮಾಡುವ ಕಾರ್ಯ ಅತ್ಯಂತ ಯಶಸ್ವಿಯಾಗಿ ನಡೆದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಕಾರಾಗೃಹದ ಅಧೀಕ್ಷಕ ಡಾ. ಐ.ಜೆ. ಮ್ಯಾಗೇರಿ ಅವರು ಮಾತನಾಡಿ, ಯಾವ ವ್ಯೆಕ್ತಿ ಜ್ಞಾನವೆಂಬ ಜ್ಯೋತಿಯನ್ನು ತನ್ನ ಜೀವನದಲ್ಲಿ ಬೆಳಗಿಸಿಕೊಳ್ಳುತ್ತಾನೋ ಆತನು ಸಮಾಜಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡುತ್ತಾನೆ. ನಿಮ್ಮಿಂದಲೇ ಈ ಬಂಧಿಖಾನೆ ಎಂಬ ವಿಷಯ ಕೊನೆಯಾಗಬೇಕು, ನೀವೆಲ್ಲರೂ ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಮುಖಾಂತರ ಸುಸ್ಥಿರ ಸಮಾಜ ನಿರ್ಮಿಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸುರೇಶ ಕುಪ್ಪಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಅನಕ್ಷರತೆ ಹೋಗಲಾಡಿಸಿ, ಪ್ರತಿಯೊಬ್ಬರನ್ನೂ ಸಾಕ್ಷರರನ್ನಾಗಿ ಮಾಡುವ ಸಂಕಲ್ಪ ನಾವೆಲ್ಲರೂ ಮಾಡೋಣ. ವಿದ್ಯಾವಂತ ಸಮುದಾಯದವರು ಅನಕ್ಷರಸ್ಥರಿಗೆ, ಅಕ್ಷರ ಜ್ಞಾನ ನೀಡುವ ಕೆಲಸವಾಗಬೇಕು. ಅಂದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಿದ ಸ್ಪರ್ಧೆಗಳಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಲಾಯಿತು. ಅನಕ್ಷರಸ್ಥ ಕೈದಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಜೈಲರ್‌ಗಳಾದ ಎ.ಕೆ. ಅನ್ಸಾರಿ, ಜಿ.ಕೆ. ಕುಲಕರ್ಣಿ, ಸವಿತಾ ಬೆಳ್ಳುಂಡಗಿ, ಶಿಕ್ಷಕರಾದ ಡಿ.ಎಸ್. ದಿಕ್ಷೀತ, ಸವಿತಾ ಕುಲಕರ್ಣಿ ಉಪಸ್ಥಿತರಿದ್ದರು.
ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿಗಳು, ಕಾರಾಗೃಹ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಜಾ ಮತ್ತು ವಿಚಾರಣಾ ಬಂಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿ.ಎಸ್. ಕಾಪಸೆ, ಸ್ವಾಗತಿಸಿದರು. ಸಜಾ ಬಂದಿ ಮೌನೇಶ ಮಾದರ ಸಾಕ್ಷರ ಗೀತೆಯನ್ನು ಹಾಡಿದರು, ಶಖಿನಾ ನದಾಫ್ ಕಾರ್ಯಕ್ರಮ ನಿರೂಪಿಸಿದರು.