ಅಕ್ರಮ ಗಾಂಜಾ ಸಾಗಣೆ: ಓರ್ವನ ಬಂಧನ
ವಿಜಯಪುರ,ಸೆ.9:ನಿಷೇಧಿತ ಗಾಂಜಾ ಸಾಗಾಟ ಮಾಡುವ ವೇಳೆ ಪೆÇಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.
ತಾಲ್ಲೂಕಿನ ಮೋನಪ್ಪನದೊಡ್ಡಿ ನಿವಾಸಿ ರಮೇಶ ಪೂಜಾರಿ ಬಂಧಿತ ಆರೋಪಿ.
ಡೋಮನಾಳ ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದಾಗ ಪೆÇಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ 4500 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಆರೋಪಿ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಒಣಗಿಸಿ ಮಾರಾಟ ಮಾಡುತ್ತಿದ್ದ.
ಒಣಗಿದ ಗಾಂಜಾವನ್ನು ಚಿಕ್ಕ ಪ್ಯಾಕ್ ಮಾಡಿ ನೆರೆಯ ಮಹಾರಾಷ್ಟ್ರಕ್ಕೆ ಹಾಗೂ ಗಡಿ ಭಾಗದಲ್ಲಿ ಮಾರಾಟ ಮಾಡುತ್ತಿದ್ದ.
ವಿಜಯಪುರ ಗ್ರಾಮೀಣ ಪೆÇಲೀಸ್ ಠಾಣೆಯ ಡಿವೈಎಸ್ಪಿ ಜಿ.ಎಚ್. ತಳಕಟ್ಟಿ, ಸಿಪಿಐ ರಾಯಗೊಂಡ ಜಾನಾರ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿ
ಆರೋಪಿಯನ್ನು ಬಂಧಿಸಿದ ಪೆÇಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ವಿಜಯಪುರ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.