ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್ ವಿರುದ್ಧ ಶಾಸಕ ಡಾ. ಸಿದ್ದು ಪಾಟೀಲ್ ದೂರು
ಹುಮನಾಬಾದ್:ಸೆ.9: ವಿಧಾನ ಪರಿಷತ್ ಸದಸ್ಯ ಡಾ ಚಂದ್ರಶೇಖರ ಪಾಟೀಲ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಪಟ್ಟಣದ ಪೆÇಲೀಸ್ ಠಾಣೆಗೆ ಶಾಸಕ ಡಾ. ಸಿದ್ದು ಪಾಟೀಲ್ ಭಾನುವಾರ ತಮ್ಮ ಬೆಂಬಲಿಗರೊಂದಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರ ಅಭಿನಂದನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹಿಂಖಾನ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿಯೇ ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್ ಮಾತನಾಡುವಾಗ, ಶಾಸಕರ ನಾಲಿಗೆ ಕಟ್ ಮಾಡುತ್ತೇನೆ ಎಂದು ಬಹಿರಂಗ ವೇದಿಕೆಯಲ್ಲಿ ಮಾತನಾಡಿದ್ದಾರೆ. ನಾನು ಕ್ಷೇತ್ರದ ಜನರ ಆಶೀರ್ವಾದಿಂದ ಶಾಸಕನಾಗಿದ್ದೇನೆ. ಆದ್ದರಿಂದ ಇದು ನನ್ನ ನಾಲಿಗೆ ಕಟ್ ಮಾಡುವ ಮಾತಲ್ಲ, ಬದಲಿಗೆ ಕ್ಷೇತ್ರದ ಜನರ ನಾಲಿಗೆ ಕಟ್ ಮಾಡುತ್ತೇನೆ ಎಂಬ ಸಂದೇಶ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯರ ಹೇಳಿಕೆ ವಿರುದ್ಧ ಈಗಾಗಲೇ ಪೆÇಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಹಿರಿಯ ಪೆÇಲೀಸ್ ಅಧಿಕಾರಿಗಳ ಹಾಗೂ ಪಕ್ಷದ ಮುಖಂಡರ ಗಮನಕ್ಕೂ ತರುತ್ತೇನೆ. ತಪ್ಪಿಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆಂದು ಹೇಳಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಇದ್ದರು.