ಹುಲಗಪ್ಪಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ತಾಳಿಕೋಟೆ:ಸೆ.9: ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಆಯ್ಕೆಯಲ್ಲಿ ತಾಲೂಕಿನ ಗಡಿಸೋಮನಾಳ ಎಲ್‍ಟಿ 1 ರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಹುಲಗಪ್ಪ ಎನ್.ಎಚ್. ಅವರು ಆಯ್ಕೆಗೊಂಡಿದ್ದು ಸೆಪ್ಟೆಂಬರ್ 5ರಂದು ಜಿಲ್ಲೆಯ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಿ ಗೌರವಿಸಲಾಗಿದೆ.
ತಾಳಿಕೋಟೆ ಮತ್ತು ಮುದ್ದೇಬಿಹಾಳ ತಾಲೂಕಿನ ಕಿರಿಯ ಪ್ರಾಥಮಿಕ ವಿಭಾಗದಿಂದ ಗಡಿಸೋಮನಾಳ ಎಲ್ ಟಿ-1 ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹುಲಗಪ್ಪ ಎನ್ ಎಚ್ ಅವರ ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗಿದೆ.
ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯ ಜೊತೆಗೆ 5 ಸಾವಿರ ನಗದು, ಪ್ರಮಾಣ ಪತ್ರ, ಪುಸ್ತಕ ಮತ್ತು ಹೂಗುಚ್ಚವನ್ನು ನೀಡಿ ಗೌರವಿಸಲಾಗಿದೆ.
ಪ್ರಶಸ್ತಿ ಪುರಸ್ಕೃತರಾದ ಹುಲಗಪ್ಪ ಎನ್ ಎಚ್ ಅವರಿಗೆ ತಾಳಿಕೋಟೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕಾ ಸಮಿತಿಯ ವತಿಯು ಅಭಿನಂದಿಸಿದೆ.