ವ್ಹಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ
ತಾಳಿಕೋಟೆ:ಸೆ.9: ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಜಯಪುರ ಹಾಗೂ ಎಸ್.ಕೆ.ಪದವಿ ಪೂರ್ವ ಶಿಕ್ಷಣ ಮಹಾವಿದ್ಯಾಲಯ ತಾಳಿಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ಜರಗಿದ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ತಾಳಿಕೋಟೆಯ ಎಚ್.ಎಸ್.ಪಾಟೀಲ ಸ್ವತಂತ್ರ ಪದವಿ ಪೂರ್ವ ಶಿಕ್ಷಣದ ಮಹಾವಿದ್ಯಾಲಯದ ಬಾಲಕರ ತಂಡವು ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅದರಂತೆ ಇದೇ ಶಾಲೆಯ ಬಾಲಕಿಯರ ತಂಡವು ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಮತ್ತು ಬಾಲಕರ ತಂಡವು ಕಬಡ್ಡಿ ಪಂದ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಕ್ರೀಡೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಎಚ್.ಎಸ್.ಪಾಟೀಲ, ಕಾರ್ಯದರ್ಶಿಗಳಾದ ಸಚಿನ್.ಎಚ್.ಪಾಟೀಲ, ಕಿರಣಕುಮಾರ. ಎಚ್. ಪಾಟೀಲ, ಪ್ರಾಚಾರ್ಯರಾದ ಶ್ರೀಮತಿ ಎಮ್.ಎಸ್.ಬಿರಾದಾರ, ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶಿವಕುಮಾರ. ನಾಯಕ ಹಾಗೂ ಸಂಸ್ಥೆಯ ಸಮಸ್ತ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿಯೂ ಸ್ಪೂರ್ತಿಯಿಂದ ಆಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಯ ಹಾಗೂ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಲು ಎಂದು ಸಂಸ್ಥೆಯ ಅಧ್ಯಕ್ಷರಾದ ಎಚ್.ಎಸ್.ಪಾಟೀಲ ಅವರು ಶುಭಹಾರೈಸಿದ್ದಾರೆ. ಅಲ್ಲದೇ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದವರೆಗೆ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಕ್ರೀಡಾ ಸೌಲಭ್ಯಗಳನ್ನು ಹಾಗೂ ನುರಿತ ತರಬೇತುದಾರರನ್ನು ಒದಗಿಸಲು ಸಂಸ್ಥೆಯು ಸದಾ ಸಿದ್ಧವಿದೆ ಎಂಬ ಭರವಸೆಯನ್ನು ನೀಡಿದರು.