ವಿಚಾರಣೆಗೆ ನ್ಯಾಯಾಲಕ್ಕೆ ಹಾಜರಾದ ಚಿತ್ರದುರ್ಗದ ಶ್ರೀ ಮುರುಘಾ ಶರಣರು
ಸಂಜೆವಾಣಿ ವಾರ್ತೆ
ಚಿತ್ರದುರ್ಗ,ಸೆ.9: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು  ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಪೊಲೀಸರು ಕರೆ ತಂದರು.ಕಳೆದ ಎರಡು ವರ್ಷಗಳ ಹಿಂದೆ ಮುರುಘಾ ಮಠದ ಆಶ್ರಯದಲ್ಲಿದ್ದ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿರುವ ಆರೋಪದಲ್ಲಿ ಪೊಲೀಸರು ಬಂಧಿಸಿದ್ದು, ಅಂದಿನಿಂದ ಜೈಲುವಾಸ ಅನುಭವಿಸಿ ನಂತರ 15 ದಿನಗಳ ವರೆಗೆ ಜಾಮೀನಿನ ಮೇಲೆ ಹೊರಬಂದಿದ್ದರು. ಆದರೆ ಬಾಲಕಿ ಪರ ವಕೀಲರು ಆರೋಪಿಯು ಹೊರಗಡೆ ಇರುವುದರಿಂದ ಸಾಕ್ಷಿಗಳನ್ನು ನಾಶ ಪಡಿಸುವ ಸಂಭವವಿದೆ. ಆದ್ದರಿಂದ ಜಾಮೀನನ್ನು ರದ್ದುಗೊಳಿಸಬೇಕು ಎಂದು ಕೇಳಿಕೊಂಡಿದ್ದರಿಂದ, ನ್ಯಾಯಾಲಯವು ಜಾಮೀನನ್ನು ರದ್ದುಗೊಳಿಸಿತ್ತು. ಅಂದಿನಿಂದ ಮುರುಘಾ ಶರಣರು ಜೈಲುವಾಸ ಅನುಭವಿಸುತ್ತಿದ್ದಾರೆ.ಇಂದು 12 ಗಂಟೆ ಸುಮಾರಿಗೆ ಪೋಕ್ಸೋ ಪ್ರಕರಣ ವಿಚಾರಣೆ ಇರುವುದರಿಂದ ಪೊಲೀಸರು ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಕರೆತಂದಿದ್ದರು.ಇಂದು ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಬೆಂಗಳೂರಿನ ಹಿರಿಯ ವಕೀಲ ಸಿ ವಿ ನಾಗೇಶ ಅವರು ಮುರುಘಾ ಶರಣರ ಪರ ವಾದ ಮಂಡಿಸಲಿದ್ದಾರೆ.