ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ
ಕಲಬುರಗಿ,ಸೆ.8-ಬಸ್ ಇಳಿದು ಪತ್ನಿ ಜೊತೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರ ಹೊರವಲಯದ ಕೆಸರಟಗಿ ಬಳಿ ಶನಿವಾರ ರಾತ್ರಿ 9.30ರ ಸುಮಾರಿಗೆ ನಡೆದಿದೆ.
ಆಶ್ರಯ ಕಾಲೋನಿಯ ಕಪೀಲ್ ತಂದೆ ಲಕ್ಷ್ಮಣ ಗಾಯಕವಾಡ ಕೊಲೆಯಾದವರು.
ಕಪೀಲ್ ಅವರು ಶನಿವಾರ ರಾತ್ರಿ 9.30ರ ಸುಮಾರಿಗೆ ಬಸ್ ಇಳಿದು ಪತ್ನಿ ಜೊತೆ ಕೆಸರಟಗಿಯಿಂದ ಆಶ್ರಯ ಕಾಲೋನಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ವೈÀಯಕ್ತಿಕ ಕಾರಣಗಳಿಂದ ಕೊಲೆ ನಡೆದಿರಬಹುದು. ಈ ದಿಶೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.