ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು
ವಿಜಯಪುರ, ಸೆ.8:ಜಾತ್ರಾ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ದೇವರ ಹಿಪ್ಪರಗಿ ತಾಲ್ಲೂಕಿನ ಬಿ.ಬಿ. ಇಂಗಳಗಿ ಗ್ರಾಮದಲ್ಲಿ ನಡೆದಿದೆ.
ದೇವೇಂದ್ರ ಬಡಿಗೇರ (24) ರಥದ ಚಕ್ರಕ್ಕೆ ಸಿಲುಕಿ ಸಾವನಪ್ಪಿದ್ದಾನೆ.
ಈ ದುರಂತದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬಿ.ಬಿ. ಇಂಗಳಗಿ ಗ್ರಾಮದ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದೆ.
ರಥವನ್ನು ಎಳೆಯುವ ವೇಳೆ ಆಯತಪ್ಪಿ ಯುವಕ ಚಕ್ರದ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ದೇವೇಂದ್ರನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದಾಗ ಮಾರ್ಗ ಮಧ್ಯೆದಲ್ಲಿ
ಅಸುನೀಗಿದ್ದಾನೆ.
ಕಲಕೇರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.