ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರ ಪ್ರವಾಸ
ಕಲಬುರಗಿ:ಅ.3:ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ ಧರ್ಮಸಿಂಗ್ ಅವರು ಅಕ್ಟೋಬರ್ 4 ರಂದು ಶುಕ್ರವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿ ಕೆ.ಕೆ.ಆರ್.ಡಿ.ಬಿ. ಕೇಂದ್ರ ಕಚೇರಿಯಲ್ಲಿ ಎಜ್ಯುಕೇಶನ್ ಎಕ್ಸ್‍ಪರ್ಟ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು.
ನಂತರ ಅಂದು ಸಂಜೆ 5.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರಿಗೆ ಪ್ರಯಾಣಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮರಳಿ ರಾತ್ರಿ 10.30 ಗಂಟೆಗೆ ಬೀದರಿಂದ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ನಂತರ ಅಕ್ಟೋಬರ್ 5 ರಂದು ಶನಿವಾರ ಬೆಳಿಗ್ಗೆ 7 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ರಾಯಚೂರಿಗೆ ಪ್ರಯಾಣಿಸುವರು.