ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ
ಕಲಬುರಗಿ:ಅ.3:ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮೂಲ ನದಿಗಳಾದ ಭೀಮಾ ಹಾಗೂ ಬೆಣೇತ್ತೋರ ನದಿಗಳ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ಕಲುಷಿತ ನೀರು ಬರುತ್ತಿದೆ. ಕುಡಿಯುವ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಕಲಬುರಗಿ ನಗರ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ- ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.