ಬಾಹ್ಯಾಕಾಶ ಕ್ಷೇತ್ರಕ್ಕೆ ಭಾರತದ ಕೊಡುಗೆ ಅಪಾರ
ಕಲಬುರಗಿ:ಅ.3:ಚಂದ್ರ, ವಿವಿಧ ಗ್ರಹಗಳು, ಬಾಹ್ಯಾಕಾಶದ ಬಗ್ಗೆ ಅಧ್ಯಯನ ಮಾಡಲು ನಮ್ಮ ದೇಶ ಆಗಾಗ್ಗೆ ಉಪಗ್ರಹಗಳು ಕಳಿಸಿದೆ. ಅದರಲ್ಲಿ ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹವಾದ ಚಂದ್ರನ ವಾತಾವರಣೆ ಸೇರಿದಂತೆ ಅಲ್ಲಿನ ಮಾಹಿತಿಯ ಬಗ್ಗೆ ವ್ಯಾಪಕವಾಗಿ ಸಂಶೋಧನೆಗಾಗಿ ಭಾರತ ಕಳೆದ ವರ್ಷ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಪಾದಾರ್ಪಣೆ ಮಾಡುವ ಮೂಲಕ ಇಡೀ ವಿಶ್ವವೇ ಭಾರತದೆಡಗೆ ತಿರುಗಿ ನೋಡುವಂತೆ ಮಾಡುವ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಮೈಲಿಗಲ್ಲನ್ನು ಸ್ಥಾಪಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ರಾಷ್ಟ್ರೀಯ ಬಾಹ್ಯಾಕಾಶ ಸಪ್ತಾಹ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಭಾರತದ ಬಾಹ್ಯಾಕಾಶ ಯೋಜನೆಗಳು ಜನರ ಜೀವನದ ಮಟ್ಟವನ್ನು ಸುಧಾರಿಸುವಲ್ಲಿ ಪೂರಕವಾಗಿವೆ. ಹವಾಮಾನ ಮೂನ್ಸೂಚನೆ, ದೂರವಾಣಿ ಕರೆ, ಮಾಹಿತಿ ಪ್ರಸಾರ, ಇಂಟರನೆಟ್ ಸಂಪರ್ಕ, ನೈಸರ್ಗಿ ಆಪತ್ತುಗಳ ಸೂಚನೆ, ಹವಾಮಾನ ವರದಿ ಸೇರಿದಂತೆ ಮತ್ತಿತರ ಪ್ರಮುಖ ಸಂಗತಿಗಳ ಬಗ್ಗೆ ಮಾಹಿತಿ ಒದಗಿಸುತ್ತವೆ. ಯುವಕರು ವಿಜ್ಞಾನ ಮತ್ತು ತಂತ್ರಜ್ಞಾನದತ್ತ ಚಿತ್ತಹರಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿ ನಿಲೊಫರ್ ಶೇಖ್, ಪ್ರಮುಖರಾದ ಶಿವಲೀಲಾ, ರಾಧಿಕಾ, ಶೇರ್ ಅಲಿ, ಕಲ್ಮೇಶ ಸೇರಿದಂತೆ ಮತ್ತಿತರರಿದ್ದರು.