ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಹುಮನಾಬಾದ್:ಸೆ.8:ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿಯ ಯುವತಿ ಕೊಲೆ ಖಂಡಿಸಿ ದಲಿತ ಸಮುದಾಯಗಳ ಒಕ್ಕೂಟ, ಕನ್ನಡಪರ ಸಂಘಟನೆಗಳು, ಟೋಕ್ರೆ ಕೋಲಿ, ಕೋಲಿ ಕಬ್ಬಲಿಗ ತಾಲ್ಲೂಕು ಸಮಿತಿ ಹಾಗೂ ಅಂಬಿಗರ ಚೌಡಯ್ಯ ಯುವ ಸೇನೆ ಸಮಿತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ವೀರಭದ್ರೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆಯು ಬಸವೇಶ್ವರ ವೃತ್ತ, ಬಾಲಾಜಿ ಮಂದಿರ, ಸರ್ದಾರ್ ವಲ್ಲಭಭಾಯ್ ಪಟೇಲ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಜರುಗಿತು. ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅಂಜುಂ ತಬಸುಮ್ ಅವರಿಗೆ ಸಲ್ಲಿಸಿದರು.
ನಂತರ ಸಂಘಟನೆಯ ಪ್ರಮುಖರು ಮಾತನಾಡಿ, ‘ಲೈಂಗಿಕ ದೌರ್ಜನ್ಯವಸೆಗಿ ಕೊಲೆ ಮಾಡಿರುವುದು ಸಮುದಾಯದ ಜನರಿಗೆ ನೋವುಂಟು ಮಾಡಿದೆ. ಈ ಪ್ರಕರಣದ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು. ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಯುವತಿ ಕುಟುಂಬದವರು ಬಡವರಿದ್ದಾರೆ. ಹೀಗಾಗಿ ಕುಟುಂಬಕ್ಕೆ ಒಂದು ನಿವೇಶನ, ಆರ್ಥಿಕ ನೆರವು ಕಲ್ಪಿಸಬೇಕು’ ಎಂದು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂದರ್ಭದಲ್ಲಿ ದತ್ತು ಗುರುಜೀ, ಅವಿನಾಶ್ ಪೆÇೀಲದಾಸ್, ನಾಗಭೂಷಣ ಸಂಗಮ್, ಬ್ಯಾಂಕ್ ರೆಡ್ಡಿ, ಅಭಿಷೇಕ್ ಪಾಟೀಲ, ಸಂತೋಷ್ ಪಾಟೀಲ, ಜಗನ್ನಾಥ್ ಜಮಾದಾರ್, ಲಕ್ಷ್ಮಿ ಪುತ್ರ ಮಾಳಗೆ, ದಯಾನಂದ ಮೇತ್ರೆ, ಮನೋಜ ಸಿತಾಳೆ, ಚಂದ್ರಕಾಂತ ಜಮಾದಾರ್, ಸೇರಿದಂತೆ ಅನೇಕರು ಇದ್ದರು.