ಅನ್ನ ಕೊಡುವ ಶಕ್ತಿ ಕನ್ನಡಕ್ಕಿದೆ: ಕುಂ.ವೀರಭದ್ರಪ್ಪ
ಬೀದರ್ :ಸೆ.8: ‘ಕನ್ನಡಕ್ಕೆ ಅನ್ನ ಕೊಡುವ ಶಕ್ತಿಯಿಲ್ಲ ಎಂಬ ಕಲ್ಪನೆ ನಮ್ಮಲ್ಲಿ ಇದೆ. ಆದರೆ, ಅದು ತಪ್ಪು. ಅದನ್ನು ಯಾರು ಹೇಳಿದ್ದಾರೋ ಗೊತ್ತಿಲ್ಲ. ಕನ್ನಡ ಶಾಲೆ ಹಾಗೂ ಕನ್ನಡ ಭಾಷೆಯಲ್ಲಿ ಓದಿದವರು ಅನೇಕ ದೊಡ್ಡ ಸ್ಥಾನಗಳನ್ನು ಅಲಂಕರಿಸಿದ್ದಾರೆ’ ಎಂದು ಸಾಹಿತಿ ಕುಂ.ವೀರಭದ್ರಪ್ಪ ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ನಾನು ಕೂಡ ಸರ್ಕಾರಿ ಕನ್ನಡ ಶಾಲೆಯಲ್ಲಿ ಓದಿದ್ದೇನೆ. ನನ್ನಂತಹ ಅನೇಕರು ಓದಿ ದೊಡ್ಡ ಸ್ಥಾನ ಅಲಂಕರಿಸಿದ್ದಾರೆ. ಕನ್ನಡದಲ್ಲಿ 56 ಸಂಬಂಧ ವಾಚಕಗಳಿವೆ. ಬಸವಣ್ಣ, ಅಕ್ಕಮಹಾದೇವಿ ದೊಡ್ಡ ನಾಮವಾಚಕಗಳು’ ಎಂದು ಹೇಳಿದರು.
‘ಕನ್ನಡ ಶಾಲೆ ಮುಚ್ಚಿದರೆ ತಾಯಿ ಭುವನೇಶ್ವರಿ ಬಾಯಿ ಮುಚ್ಚಿದಂತೆ, ಜೀವ ತೆಗೆದಂತೆ. ಕಡಿಮೆ ಮಕ್ಕಳು ಇದ್ದರೂ ಕನ್ನಡ ಶಾಲೆಗಳನ್ನು ಮುಚ್ಚಬಾರದು. ಕನ್ನಡಕ್ಕೆ ಅನ್ನ ಕೊಡುವ ಶಕ್ತಿ ಇಲ್ಲ ಎಂದು ಯಾವ ಮುಠ್ಠಾಳ ಹೇಳಿದ್ದಾನೋ ಗೊತ್ತಿಲ್ಲ. ಅದು ಶುದ್ಧ ಸುಳ್ಳು. ಆಂಗ್ಲ ಮಾಧ್ಯಮದಲ್ಲಿ ಓದಿದವರು ಐ.ಎ.ಎಸ್, ಐ.ಪಿ.ಎಸ್. ಅಧಿಕಾರಿಗಳಾಗಿದ್ದರೆ, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಕನ್ನಡಕ್ಕಿರುವ ತಾಕತ್ತು ಇದು’ ಎಂದು ತಿಳಿಸಿದರು.
‘ಪಾಲಕರು ವೃದ್ಧಾಪ್ಯದ ದಿನಗಳನ್ನು ಮಕ್ಕಳೊಂದಿಗೆ ಸಂತಸದಿಂದ ಕಳೆಯಬೇಕಾದರೆ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಕಳುಹಿಸಬೇಕು. ವೃದ್ಧಾಶ್ರಮ ಸೇರಬೇಕಾದರೆ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಓದಿಸಬೇಕು’ ಎಂದರು.
ಬೀದರ್‍ನ ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು ಸಮ್ಮೇಳನದ ಸರ್ವಾಧ್ಯಕ್ಷೆ ಪೂರ್ಣಿಮಾ ಜಾರ್ಜ್ ಸಾಹಿತಿ ಕುಂ. ವೀರಭದ್ರಪ್ಪ ಹಾಗೂ ಇತರರು ಸಮ್ಮೇಳನದ ಕಿರು ಹೊತ್ತಿಗೆ ಬಿಡುಗಡೆಗೊಳಿಸಿದರು
‘ಯುರೋ???ನ 24 ರಾಷ್ಟ್ರಗಳಲ್ಲಿ ಆಂಗ್ಲ ಭಾಷೆ ಬಳಸುವುದಿಲ್ಲ. ಚೀನಾ, ಜಪಾನ್, ಮಂಗೋಲಿಯಾದಲ್ಲೂ ಇಂಗ್ಲಿಷ್ ಭಾಷೆ ಬಳಕೆಯಲ್ಲಿಲ್ಲ. ಮಾತೃಭಾಷೆಗಳೇ ಅಲ್ಲಿ ಪ್ರಧಾನವಾಗಿವೆ. ಪಾಲಕರು, ಆಂಗ್ಲ ಭಾಷೆ ವ್ಯಾಮೋಹ ಬಿಡಬೇಕು. ಮಕ್ಕಳನ್ನು ಕನ್ನಡ ಶಾಲೆಗೆ ಕಳುಹಿಸಬೇಕು. ಈ ಮೂಲಕ ಕನ್ನಡ ಶಾಲೆ, ಭಾಷೆಯನ್ನು ಉಳಿಸಬೇಕು’ ಎಂದು ಹೇಳಿದರು.
ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಬಳ್ಳಾರಿಯ ಮಯೂರಿ ಬಸವರಾಜ ಕುಚಿಪುಡಿ ನೃತ್ಯ ಪ್ರದರ್ಶಿಸಿದರು. ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಎಸ್.ಎಸ್.ಸಿದ್ದಾರೆಡ್ಡಿ ಫೌಂಡೇಷನ್ ಅಧ್ಯಕ್ಷೆ ಗುರಮ್ಮ ಸಿದ್ದಾರೆಡ್ಡಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ನಿರ್ದೇಶಕ ಮುನೇಶ್ವರ ಲಾಖಾ, ಚಂದ್ರಶೇಖರ ಪಾಟೀಲ, ಓಂಕಾಂತ ಸೂರ್ಯವಂಶಿ, ಸುರೇಶ ಅಕ್ಕಣ್ಣ, ಪ್ರಭುರಾವ್ ತೂಗಾವೆ, ಪ್ರಶಾಂತ ಮಠಪತಿ, ಎಂ.ಎಸ್. ಮನೋಹರ, ನಾಗಭೂಷಣ ಮಾಮಡಿ, ಶಾಲಿವಾನ್ ಉದಗಿರೆ, ಸಿದ್ಧಲಿಂಗ ಚಿಂಚೋಳಿ, ಶಾಂತಲಿಂಗ ಮಠಪತಿ, ಬಸವರಾಜ ಹಾವಣ್ಣ, ರಮೇಶ ಸಲಗರ, ಹಾವಶೆಟ್ಟಿ ಪಾಟೀಲ, ಬಾಬುರಾವ್ ದಾನಿ, ಶಿವಕುಮಾರ ಕಟ್ಟೆ, ಶಿವಶಂಕರ ಟೋಕರೆ, ಟಿ.ಎಂ. ಮಚ್ಚೆ, ಕೇಂದ್ರ ಕಸಾಪ ಮಹಿಳಾ ಪ್ರತಿನಿಧಿ ಮಲ್ಲಮ್ಮ ಆರ್. ಪಾಟೀಲ ಹಾಜರಿದ್ದರು. ಭಾನುಪ್ರಿಯಾ ಅರಳಿ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು.
ಸಮ್ಮೇಳನದ ಸರ್ವಾಧ್ಯಕ್ಷೆ ಪೂರ್ಣಿಮಾ ಜಾರ್ಜ್ ಅವರನ್ನು ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು ಗೌರವಿಸಿದರು’ ಸಂಸ್ಕøತ ಭಾಷೆಯಲ್ಲಿ ಓದಿದರೆ ಸ್ವರ್ಗದ ಬಾಗಿಲು ತೆರೆಯುತ್ತದೆ ಎನ್ನುವುದು ಮುಠ್ಠಾಳತನ. ಇದು ಸರಿಯಾದ ಧೋರಣೆ ಅಲ್ಲ ಎಂದು ಸಾಹಿತಿ ಕುಂ.ವೀರಭದ್ರಪ್ಪ ಖಾರವಾಗಿ ನುಡಿದರು. ‘ಮನುಷ್ಯ ವಿರೋಧಿ ಪುರೋಹಿತಶಾಹಿ ವ್ಯವಸ್ಥೆಯನ್ನು ನಾವೆಲ್ಲರೂ ಆಚರಿಸುತ್ತಿದ್ದೇವೆ. ನಮ್ಮ ಮಕ್ಕಳಿಗೆ ನಾವು ಹೆಸರಿಡುವ ಸ್ವಾತಂತ್ರ್ಯವಿಲ್ಲ. ಅದಕ್ಕಾಗಿ ಪುರೋಹಿತಶಾಹಿಯನ್ನು ನೆಚ್ಚಿಕೊಂಡಿದ್ದೇವೆ. ಅತ್ಯಂತ ಅಪಾಯಕಾರಿ ಜಾತಿ ವ್ಯವಸ್ಥೆ ನಮ್ಮಲ್ಲಿದೆ. ಅಸಂಖ್ಯ ಜಾತಿಗಳು ನಮ್ಮಲ್ಲಿವೆ. ಸಂಸ್ಕೃತ ನಮ್ಮ ಭಾಷೆ ಕೊಲ್ಲುತ್ತಿದೆ. ಈ ಎಚ್ಚರದೊಂದಿಗೆ ಕನ್ನಡ ಉಳಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.’ಸ್ವರ್ಗದ ಬಾಗಿಲು ಎನ್ನುವುದು ಮುಠ್ಠಾಳತನ’
ಕುಂ. ವೀರಭದ್ರಪ್ಪ ‘ಮಕ್ಕಳು ಕಲಿಯುವ ಭಾಷೆಯ ಮಾಧ್ಯಮ ಯಾವುದು ಎಂಬುದು ಮುಖ್ಯವಲ್ಲ. ಮನಸ್ಸು ಕಟ್ಟುವ ಕೆಲಸ ಮಾಡಬೇಕಿದೆ’ ಎಂದು ಸಮ್ಮೇಳನದ ಸರ್ವಾಧ್ಯಕ್ಷೆ ಪೂರ್ಣಿಮಾ ಜಾರ್ಜ್ ಅಭಿಪ್ರಾಯಪಟ್ಟರು. ಇಂಗ್ಲಿಷ್ ಮಾಧ್ಯಮದಲ್ಲಿ ಓದಿದವರಲ್ಲಿ ಮಾನವೀಯತೆ ಇರುವುದಿಲ್ಲ ಎಂಬ ಮಾತು ಸರಿಯಾದುದಲ್ಲ. ನಾನು ನಡೆಸುವ ಶಿಕ್ಷಣ ಸಂಸ್ಥೆಯಲ್ಲಿ ಹೊರದೇಶದ ವಿದ್ಯಾರ್ಥಿಗಳಿದ್ದು ಅವರಿಗೆ ಕನ್ನಡ ಭಾಷೆ ಕೂಡ ಕಲಿಸುತ್ತಿದ್ದೇವೆ’ ಎಂದು ಹೇಳಿದರು. ನಮ್ಮ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಬೇಕು. ಶಿಕ್ಷಕರನ್ನು ಆಡಳಿತಾತ್ಮಕ ಕೆಲಸಗಳಿಗೆ ಬಳಸಿಕೊಳ್ಳಬಾರದು. ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು. 500ಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಲ್ಲಿ ಪ್ರಾಂಶುಪಾಲರೇ ಇಲ್ಲ ಅದನ್ನು ನೀಗಿಸಬೇಕು. ಶೌಚಾಲಯಗಳಲ್ಲಿ ಕನಿಷ್ಠ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯಗಳ ನಿರ್ವಹಣೆಗೆ ಅಗತ್ಯ ಹಣ ನೀಡಬೇಕು. ಐಐಟಿ ಎಐಐಎಂಎಸ್‍ನಂತಹ ಪ್ರತಿಷ್ಠಿತ ಸಂಸ್ಥೆಗಳನ್ನು ಈ ಭಾಗಕ್ಕೆ ತರಲು ರಾಜಕಾರಣಿಗಳು ಶ್ರಮಿಸಬೇಕು. ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರ ಪೆÇ್ರೀತ್ಸಾಹಿಸಬೇಕು ಎಂದು ಆಗ್ರಹಿಸಿದರು.ಭಾಷಾ ಮಾಧ್ಯಮ ಮುಖ್ಯವಲ್ಲ, ಮನಸ್ಸು ಕಟ್ಟಿ
‘ಶಾಲೆಗಳಿಗೆ ನಿವೇಶನ ಸುಸಜ್ಜಿತ ಕಟ್ಟಡ’
‘ಜಿಲ್ಲೆಯಲ್ಲಿ ಯಾವ ಶಾಲೆಗಳಿಗೆ ನಿವೇಶನ ಕೊರತೆ ಇದೆಯೋ ಅವುಗಳಿಗೆ ನಿವೇಶನ ಹಾಗೂ ಕನ್ನಡ ಮಾಧ್ಯಮದ 25 ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ ಕಲ್ಪಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕನ್ನಡ ಮಾಧ್ಯಮದ ಅನೇಕ ಶಾಲೆಗಳು ನಿವೇಶನ ಕೊರತೆ ಎದುರಿಸುತ್ತಿವೆ. ಅದನ್ನು ನಿವಾರಿಸುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಪ್ರಸಕ್ತ ವರ್ಷ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ?5 ಸಾವಿರ ಕೋಟಿ ಅನುದಾನ ಒದಗಿಸಿದೆ. ಈ ಪೈಕಿ ಜಿಲ್ಲೆಗೆ ?400 ಕೋಟಿ ಅನುದಾನ ದೊರೆತಿದೆ. ಇದರಲ್ಲಿ ?125 ಕೋಟಿಯನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾಗುವುದು. ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲಾಗುವುದು. ಇನ್ನು ಶಾಲೆಗಳಲ್ಲಿ ಶೌಚಾಲಯ ನಿರ್ವಹಣೆ ಸೇರಿದಂತೆ ಇತರೆ ಖರ್ಚು ನಿಭಾಯಿಸಲು ಸರ್ಕಾರದಿಂದ ಎಸ್‍ಡಿಎಂಸಿಗಳಿಗೆ ಹಣ ನೀಡಲಾಗುತ್ತಿದೆ. ಅದನ್ನು ಅವರು ತಮ್ಮ ವಿವೇಚನೆ ಬಳಸಿಕೊಂಡು ಖರ್ಚು ಮಾಡಬಹುದು. ಶಾಲೆಗಳ ವಿದ್ಯುತ್ ಶುಲ್ಕ ಸರ್ಕಾರದಿಂದ ಮನ್ನಾ ಮಾಡಲಾಗಿದೆ. ಇನ್ನು ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ನವೀಕರಣ ವಿಷಯದ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸುವೆ ಎಂದು ಹೇಳಿದರು.
‘ಜಿಲ್ಲಾ ಕನ್ನಡ ಭವನದ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೊಂದಿಗೆ ಚರ್ಚಿಸಿ ನಾನು ಬಗೆಹರಿಸುವೆ’ ಎಂದು ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅದ್ಯಕ್ಷ ಸುರೇಶ ಚನಶೆಟ್ಟಿ ಜಿಲ್ಲಾ ಕನ್ನಡ ಭವನವನ್ನು ಕನ್ನಡ ಸಾಹಿತ್ಯಗಳ ಅಭಿವೃದ್ಧಿ ಪರಿಷತ್ತಿನ ಜಿಲ್ಲಾ ಘಟಕಕ್ಕೆ ವಹಿಸಬೇಕು. ಈ ಬಗ್ಗೆ ಸಚಿವ ಖಂಡ್ರೆಯವರು ವಿಶೇಷ ಮುತುವರ್ಜಿ ವಹಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ್ ಕಂಬಳಿವಾಲೆ ಹೆಸರಲ್ಲಿ ಪ್ರತಿಷ್ಠಾನ ರಚಿಸಬೇಕು ಎಂದು ಬೇಡಿಕೆ ಮಂಡಿಸಿದರು. ಅದಕ್ಕೆ ಸಚಿವರು ಮೇಲಿನಂತೆ ಪ್ರತಿಕ್ರಿಯಿಸಿದರು.ಕನ್ನಡ ಭವನದ ವಿವಾದ ಬಗೆಹರಿಸುವೆ: ಖಂಡ್ರೆ’ಒಂದು ವೇಳೆ ಈ ಜಗತ್ತಿನಲ್ಲಿ ಭಾಷೆ ಇಲ್ಲದಿದ್ದರೆ ಮನುಷ್ಯ ಮೃಗವಾಗುತ್ತಿದ್ದ. ಎಲ್ಲ ಅಭಿವೃದ್ಧಿಗೆ ಭಾಷೆಯೇ ಮೂಲಾಧಾರವಾಗಿದೆ’ ಎಂದು ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟರು. ಕನ್ನಡಕ್ಕೆ ಅದರದೇ ಆದ ಶ್ರೇಷ್ಠ ಇತಿಹಾಸ ಪರಂಪರೆ ಇದೆ. ಪಂಪ ರನ್ನ ಜನ್ನ ರಾಘವಾಂಕ ಹರಿಹರ ಹೀಗೆ ಅನೇಕರು ಕೊಡುಗೆ ಕೊಟ್ಟಿದ್ದಾರೆ. ದಾಸ ಸಾಹಿತ್ಯ ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಎರಡು ಕಣ್ಣುಗಳು. ಜಗತ್ತಿಗೆ ಪ್ರಥಮ ಸಂಸತ್ತು ಕೊಟ್ಟಿರುವುದು ಬೀದರ್ ಎಂದರು.’ಭಾಷೆ ಇಲ್ಲದಿದ್ದರೆ ಮನುಷ್ಯ ಮೃಗ’
ನಾಲ್ಕು ಗೊತ್ತುವಳಿ ಅಂಗೀಕಾರ; ಸಮ್ಮೇಳನದಲ್ಲಿ ಒಟ್ಟು ನಾಲ್ಕು ಗೊತ್ತುವಳಿ ಅಂಗೀಕರಿಸಲಾಯಿತು. ಅವುಗಳ ವಿವರ ಇಂತಿದೆ.