ಬಸವಕಲ್ಯಾಣ ಯುವತಿ ಕೊಲೆ : ಕಠಿಣ ಕ್ರಮಕ್ಕೆ ಒತ್ತಾಯ
ಭಾಲ್ಕಿ:ಸೆ.8: ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಯುವತಿಯನ್ನು ಅತ್ಯಾಚ್ಯಾರ ಮಾಡಿ ಕೊಲೆಗೈದ ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಲೂಕಿನ ಖಟಕಚಿಂಚೋಳಿ ಗ್ರಾಮದ ಹುಗ್ಗೆಳ್ಳಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ದೇವರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ, ಅತ್ಯಾಚಾರ ಎಸಗಿ, ಯುವತಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕಾರಣ ಪ್ರಕರಣದ ಸಮಗ್ರ ತನಿಖೆ ನಡೆಸಿ, ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.